ಕಿಲ್ಲರ್ ಕೊರೊನಾ ಸೋಂಕು ಪೀಡಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇದೀಗ ಬ್ರಿಟನ್ ರಾಜಕುಮಾರ ಚಾರ್ಲ್ಸ್ ಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಚಾರ್ಲ್ಸ್ ಅವರ ರಕ್ತ ಪರೀಕ್ಷೆ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದು ಅವರಿಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗಿದೆ. ಸರ್ಕಾರ ಮತ್ತು ವೈದ್ಯಕೀಯ ಸಲಹೆಗಾರರ ಪ್ರಕಾರ ಸ್ಕಾಟ್ಲೆಂಡ್ ನಿವಾಸದಲ್ಲಿ ಪ್ರಿನ್ಸ್ ಚಾರ್ಲ್ಸ್ ಮತ್ತು ಅವರ ಪತ್ನಿ ಸ್ವಯಂ ಪ್ರತ್ಯೇಕವಾಗಿದ್ದಾರೆ.
ಇತ್ತೀಚಿನ ದಿನಗಳಲ್ಲಿ ರಾಜಕುಮಾರ ಚಾರ್ಲ್ಸ್ ಅನೇಕ ಸಾರ್ವಜನಿಕ ಹಾಗೂ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಎಲ್ಲಿಂದ ಸೋಂಕು ತಗುಲಿದೆ ಎನ್ನುವುದು ಗೊತ್ತಾಗಿಲ್ಲ ಎಂದು ಕ್ಲಾರೆನ್ಸ್ ಹೌಸ್ ವಕ್ತಾರರು ತಿಳಿಸಿದ್ದಾರೆ.
ಇನ್ನು ರಾಜಕುಮಾರ ಚಾರ್ಲ್ಸ್ ಪತ್ನಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು,ನೆಗೆಟಿವ್ ರಿಪೋರ್ಟ್ ಬಂದಿದೆ.








