ಬೆಂಗಳೂರು: ಬ್ರಿಟನ್ ರೂಪಾಂತರಿ ಕೊರೊನಾ ಸೋಂಕು ರಾಜಧಾನಿ ಬೆಂಗಳೂರಿನ ಮೂವರಿಗೆ ದೃಢಪಟ್ಟಿದ್ದರೂ ಆತಂಕಪಡುವ ಅಗತ್ಯವಿಲ್ಲ. ನಮ್ಮಲ್ಲಿ ಬ್ರಿಟನ್ ರೂಪಾಂತರಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆ ಇದೆ. ಹೀಗಾಗಿ ಲಾಕ್ಡೌನ್, ಸೀಲ್ಡೌನ್ ಮಾಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸುಧಾಕರ್, ರೂಪಾಂತರಿ ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ರೂಪಾಂತರಿ ಕೊರೊನಾದ ಪರಿಣಾಮ ಹೆಚ್ಚಿಲ್ಲ. ಹೀಗಾಗಿ ಜನರು ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ.
ನಿಮ್ಹಾನ್ಸ್ನಲ್ಲಿ ಪರೀಕ್ಷೆ ನಡೆಸಿದ 3 ಜನರಿಗೆ ಬ್ರಿಟನ್ ರೂಪಾಂತರಿ ಕೊರೊನಾ ದೃಢಪಟ್ಟಿದೆ. ವರದಿ ತೆಗೆದುಕೊಂಡು ನಿಮ್ಹಾನ್ಸ್ ವೈದ್ಯರ ಜೊತೆ ಮಾತನಾಡಿದ್ದೇನೆ. ಇವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದವರನ್ನು ಕ್ವಾರಂಟೈನ್ ಮಾಡಲಾಗಿದೆ. ವಿಮಾನದಲ್ಲಿ ಬಂದಿಳಿದ ಸಹ ಪ್ರಯಾಣಿಕರ ವರದಿ ಪಡೆಯಲಾಗಿದೆ.
ತಾಯಿ-ಮಗುವಿಗೆ ಬ್ರಿಟನ್ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಬ್ರಿಟನ್ನಿಂದ ಬಂದು ನಾಪತ್ತೆಯಾದವರನ್ನು 48 ಗಂಟೆಗಳಲ್ಲಿ ಹುಡುಕೊಡುವುದಾಗಿ ಗೃಹ ಸಚಿವರು ತಿಳಿಸಿದ್ದಾರೆ. ಎಲ್ಲರನ್ನೂ ಪತ್ತೆ ಮಾಡಿ ಮಾಹಿತಿ ಕೊಡುವುದಾಗಿ ಹೇಳಿದ್ದಾರೆ ಎಂದು ಸುಧಾಕರ್ ತಿಳಿಸಿದ್ದಾರೆ.
ಹೊಸ ವರ್ಷಾಚರಣೆ ಮಾರ್ಗಸೂಚಿಗಳ ಬಗ್ಗೆ ಗೃಹ ಇಲಾಖೆಗೆ ಮಾಹಿತಿ ಕೊಟ್ಟಿದ್ದೇವೆ. ಈಗ ಮಾರ್ಗಸೂಚಿಯನ್ನು ಗೃಹ ಇಲಾಖೆ ಮತ್ತೆ ಪರಿಷ್ಕರಣೆ ಮಾಡುವ ಅಗತ್ಯ ಇದೆ ಎಂದು ಅಭಿಪ್ರಾಯಪಟ್ಟರು.
ಬ್ರಿಟನ್ ರೂಪಾಂತರಿ ಕೊರೊನಾ ಹರಡುವ ಆತಂಕ ಇದ್ದರೂ ಶಾಲಾ-ಕಾಲೇಜುಗಳನ್ನು ಆರಂಭಿಸಲು ಅಡ್ಡಿ ಇಲ್ಲ. ಇಂದು ಮಧ್ಯಾಹ್ನ ತಜ್ಞರ ಜತೆ ಸಭೆ ನಡೆಸಿ ಮುಂದಿನ ಮುಂಜಾಗ್ರತಾ ಕ್ರಮಗಳ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಉನ್ನತ ಶಿಕ್ಷಣ ಸಚಿವ ಡಿಸಿಎಂ ಡಾ.ಅಶ್ವತ್ಥ ನಾರಾಯಣ ಕೂಡ, ಜನವರಿ 1ರಿಂದ ಶಾಲಾ-ಕಾಲೇಜುಗಳನ್ನು ತೆರೆಯಲು ತೊಂದರೆ ಇಲ್ಲ. ಬೆಂಗಳೂರಿನ ಮೂವರಿಗೆ ಬ್ರಿಟನ್ ಕೊರೊನಾ ದೃಢಪಟ್ಟಿದ್ದರೂ ಶಾಲೆ-ಕಾಲೇಜುಗಳನ್ನು ತೆರೆಯಬಹುದು ಎಂದು ಹೇಳಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel