ಎರಡು ದಿನಗಳ ಕಾಲ ಭಾರತಕ್ಕೆ ಆಗಮಿಸಿದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್
ಗುಜರಾತ್ – ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಎರಡು ದಿನಗಳ ಭಾರತ ಪ್ರವಾಸಕ್ಕಾಗಿ ಇಂದು ಬೆಳಗ್ಗೆ ಅಹಮದಾಬಾದ್ಗೆ ಆಗಮಿಸಿದ್ದಾರೆ. ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಅವರನ್ನು ಗುಜರಾತ್ ರಾಜ್ಯಪಾಲರು, ಮುಖ್ಯಮಂತ್ರಿ ಮತ್ತು ಇತರ ಗಣ್ಯರು ಸ್ವಾಗತಿಸಿದರು. ಅಹಮದಾಬಾದ್ ವಿಮಾನ ನಿಲ್ದಾಣದಿಂದ ಹೋಟೆಲ್ಗೆ ತಲುಪುವ ನಾಲ್ಕು ಕಿಮೀ ಮಾರ್ಗದಲ್ಲಿ ವರ್ಣರಂಜಿತ ರೋಡ್ ಶೋ ಮೂಲಕ ಜಾನ್ಸನ್ಗೆ ಭವ್ಯವಾದ ಸ್ವಾಗತವನ್ನು ನೀಡಲಾಯಿತು.
ಬ್ರಿಟನ್ ಪ್ರಧಾನಿ ಸಬರಮತಿಯಲ್ಲಿರು ಗಾಂಧಿ ಆಶ್ರಮಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಗುಜರಾತ್ ಬಯೋಟೆಕ್ನಾಲಜಿ ವಿಶ್ವವಿದ್ಯಾಲಯ ಮತ್ತು ಗಾಂಧಿನಗರದಲ್ಲಿರುವ ಅಕ್ಷರಧಾಮ ದೇವಸ್ಥಾನಕ್ಕೆ ತೆರಳಲಿದ್ದಾರೆ. ಅಲ್ಲಿಂದ ವಡೋದರಾ ಬಳಿಯ ಹಲೋಲ್ನಲ್ಲಿರುವ ಜೆಸಿಬಿ ಕಂಪನಿಯ ಪ್ಲಾಂಟ್ಗೆ ಭೇಟಿ ನೀಡಿ ಸಂಜೆ ದೆಹಲಿಗೆ ತೆರಳಲಿದ್ದಾರೆ.
ಜಾನ್ಸನ್ ಅವರು ನಾಳೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಸಮಾಲೋಚನೆ ನಡೆಸಲಿದ್ದಾರೆ. ಯುನೈಟೆಡ್ ಕಿಂಗ್ಡಂನ ಪ್ರಧಾನ ಮಂತ್ರಿಯಾಗಿ ಇದು ಅವರ ಮೊದಲ ಭಾರತ ಭೇಟಿಯಾಗಿದೆ.