ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಒಲಿದು ಬಂದಿದೆ.
ಭಾರತೀಯ ಪುರುಷರ ಹಾಕಿ ತಂಡವು ಕಂಚಿನ ಪದಕ ಗೆದ್ದು ಬೀಗಿದೆ. ಸೆಮಿಫೈನಲ್ ಪಂದ್ಯದಲ್ಲಿ ಬಾರತ ಹಾಕಿ ತಂಡವು 2-1 ಗೋಲುಗಳಿಂದ ಸ್ಪೇನ್ ಮಣಿಸಿ ಕಂಚಿನ ಪದಕಕ್ಕೆ ಕೊರಳೊಡ್ಡಿದೆ. 2020 ರ ಟೋಕಿಯೋ ಒಲಿಂಪಿಕ್ಸ್ ನಲ್ಲಿಯೂ ಭಾರತ ಪುರಷರ ಹಾಕಿ ತಂಡವು ಕಂಚಿನ ಪದಕ ಗೆದ್ದಿತ್ತು. ಈ ಬಾರಿಯೂ ಕಂಚಿನ ಪದಕ ಗೆದ್ದ ಸಾಧನೆ ಮಾಡಿದೆ. ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತ ಹಾಕಿ ತಂಡವು ಜರ್ಮನಿ ವಿರುದ್ಧ ಗೆದ್ದು ಕಂಚಿನ ಪದಕ ಗೆದ್ದಿತ್ತು.
ಈ ಬಾರಿಯೂ ಕಂಚಿನ ಪದಕ ಗೆದ್ದ ಸಾಧನೆ ಮಾಡಿದೆ. ತೀವ್ರ ಹಣಾಹಣಿಯ ಪಂದ್ಯದಲ್ಲಿ ಹರ್ಮನ್ ಪ್ರೀತ್ ಸಿಂಗ್ ಎರಡೂ ಗೋಲುಗಳನ್ನು ಬಾರಿಸಿ ತಂಡಕ್ಕೆ ಕಂಚಿನ ಪದಕ ಸಿಗುವಂತೆ ಮಾಡಿದ್ದಾರೆ.