ಮೈಸೂರು: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ಅಣ್ಣ ಮತ್ತು ಅತ್ತಿಗೆಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ನರಸೀಪುರ (Narasipura) ತಾಲೂಕಿನ ನುಗ್ಗಳ್ಳಿಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಶಿವಲಿಂಗೇಗೌಡ(55), ಭಾರತಿ(47) ಕೊಲೆಯಾದ ದುರ್ದೈವಿಗಳು. ಹನುಮಂತೇಗೌಡ (50) ಕೊಲೆ ಮಾಡಿದ ಆರೋಪಿ. 15 ಗುಂಟೆ ಜಮೀನಿನ ವಿಷಯವಾಗಿ ಇಬ್ಬರು ಸಹೋದರರ ಮಧ್ಯೆ ಗಲಾಟೆ ನಡೆಯುತ್ತಿತ್ತು. ಹೀಗಾಗಿ ಇಬ್ಬರೂ ಪೊಲೀಸ್ ಠಾಣೆಯ ಮೆಟ್ಟಿಲು ಏರಿದ್ದರು. ಆದರೆ, ಇತ್ತೀಚೆಗೆ ಶಿವಲಿಂಗೇಗೌಡ ಹಾಗೂ ಪತ್ನಿ ಭಾರತಿ ತಮ್ಮ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಜಗಳ ನಡೆದು, ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ಬನ್ನೂರು ಠಾಣೆ ಪೊಲೀಸರು (Police) ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.