ಬಾಗಲಕೋಟೆ: ಅಪ್ರಾಪ್ತ ಸಹೋದರನಿಗೆ ಬೈಕ್ ನೀಡಿದ್ದಕ್ಕೆ ಅಣ್ಣನಿಗೆ ದಂಡ ವಿಧಿಸಿರುವ ಘಟನೆ ನಡೆದಿದೆ.
ಅಣ್ಣನಿಗೆ ಜಿಲ್ಲೆಯ ಜಮಖಂಡಿ ಜೆಎಂಎಫ್ಸಿ ಕೋರ್ಟ್ 25 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ. ಅಪ್ರಾಪ್ತ ಸಹೋದರನಿಗೆ ಬೈಕ್ ನೀಡಿದ್ದ ತಪ್ಪಿಗೆ ಸಚಿನ್ ರಮೇಶ್ ರಾಠೋಡ್ಗೆ 25 ಸಾವಿರ ರೂ. ದಂಡ ವಿಧಿಸಲಾಗಿದೆ.
ಸಹೋದರರು ಹುಲ್ಯಾಳದಿಂದ ಜಮಖಂಡಿಗೆ ಬರುವ ಸಂದರ್ಭದಲ್ಲಿ ತಮ್ಮ ಬೈಕ್ ಚಲಾಯಿಸಿ ವಾಹನ ತಪಾಸಣೆ ವೇಳೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಈ ಕುರಿತು ಪ್ರಕರಣ ದಾಖಲಾಗಿತ್ತು. ಮೋಟಾರು ವಾಹನ ಕಾಯ್ದೆ ಉಲ್ಲಂಘನೆ ಆರೋಪದಡಿ ಕೇಸ್ ದಾಖಲಿಸಲಾಗಿದ್ದು, ಬೈಕ್ ಮಾಲೀಕ ಸಚಿನ್ಗೆ 25,000 ರೂ. ದಂಡ ವಿಧಿಸಲಾಗಿದೆ.