ಅಕ್ಕ-ತಂಗಿಯರಿಗೆ ಸಹೋದರನೆ ಆಸರೆ ಹಾಗೂ ರಕ್ಷಕ. ಆದರೆ, ಇಲ್ಲೊಂದು ಘಟನೆಯಲ್ಲಿ ಪಾಪಿಯೊಬ್ಬ ತನ್ನ ಸ್ನೇಹಿತರೊಂದಿಗೆ ಸೇರಿ ತಂಗಿಯ ಮೇಲೆಯೇ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.
ಈ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ನಡೆದಿದೆ. ನಾಲ್ವರು ಸ್ನೇಹಿತರ ಜೊತೆಗೂಡಿ ಸ್ವಂತ ಸಹೋದರಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಚಾಕಪಾಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಘಟನೆ ನಡೆದಿದ್ದು, ವ್ಯಕ್ತಿ ಹಾಗೂ ಆತನ ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ.
ಯುವತಿಯು ತನ್ನ ಅಣ್ಣನಿಗೆ ಬೇರೊಬ್ಬರ ಜತೆ ಅಕ್ರಮ ಸಂಬಂಧ ಇರುವುದನ್ನು ಗುರುತಿಸಿದ್ದರು. ಇದು ಮುಂದುವರೆದರೆ ಬಯಲಿಗೆ ಎಳೆಯುವುದಾಗಿ ಹೇಳಿದ್ದಳು. ಆಗ ಆತ ಸಹೋದರಿಯನ್ನು ಕೊಲ್ಲಲು ಮುಂದಾಗಿದ್ದ ಎನ್ನಲಾಗಿದೆ.