ಮುಂದಿನ ಜನ್ಮದಲ್ಲಿ ಪ್ರೇಮಿಗಳಾಗೋಣ – ಡೆತ್ ನೋಟ್ ಬರೆದಿಟ್ಟು ಅಣ್ಣ-ತಂಗಿ ಆತ್ಮಹತ್ಯೆ…!
ಬಿಹಾರ : ಪ್ರೀತಿ ಕುರುಡು ಎನ್ನುತ್ತಾರೆ.. ಕೆಲವೊಮ್ಮೆ ಇದು ನಿಜ ಎನ್ನಿಸುತ್ತೆ.. ಯಾವಾಗ ಯಾರಿಗೆ ಯಾರ ಮೇಲೆ ಪ್ರೀತಿ ಹುಟ್ಟುತ್ತೆ ಅಂತ ಹೇಳೋಕಾಗಲ್ಲ.. ಇದೇ ರೀತಿಯ ಸಂಬಂಧದಲ್ಲಿ ಅಣ್ಣ ತಂಗಿಯಾಗಿದ್ದವರು ಪ್ರೀತಿಯ ಬಲೆಗೆ ಬಿದ್ದು, ಕಡೆಗೆ ತಾವು ಯಾವತ್ತೂ ಒಂದಾಗೋದಕ್ಕೆ ಸಾಧ್ಯವಿಲ್ಲ ಎಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಿಹಾರದ ಬಂಕಾ ಜಿಲ್ಲೆಯಲ್ಲಿ ನಡೆದಿದೆ.
16 ವರ್ಷದ ಹುಡುಗಿ ಹಾಗೂ 18 ವರ್ಷದ ಅಪ್ರಾಪ್ತರು ಈ ರೀತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಇಬ್ಬರು ಸಂಬಂಧದಲ್ಲಿ ಅಣ್ಣ- ತಂಗಿ. ಆದರೆ ಇವರಿಬ್ಬರ ಮಧ್ಯೆ ಪ್ರೀತಿ ಹುಟ್ಟಿದ್ದು, ಈ ವಿಚಾರ ಮನೆಯವರಿಗೆ ತಿಳಿದಿದೆ. ಆಗ ಅವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಅಣ್ಣ- ತಂಗಿ ನಡುವೆ ಇರುವ ಸಂಬಂಧ ಅರಿತ ಕುಟುಂಬಸ್ಥರು ಯುವಕನನ್ನು ಕೋಲ್ಕತ್ತಾಗೆ ಕಳುಹಿಸಿದ್ದಾರೆ. ಇತ್ತ ಮದುವೆ ನಿಮಿತ್ತ ಹುಡುಗಿಯ ಕುಟುಂಬಸ್ಥರು ಆಕೆ ಒಬ್ಬಳನ್ನೇ ಮನೆಯಲ್ಲಿ ಬಿಟ್ಟು ಹೋಗಿದ್ದರು. ಈ ವಿಚಾರ ತಿಳಿದ ಯುವಕ ನೇರವಾಗಿ ಆಕೆಯ ಮನೆಗೆ ಬಂದಿದ್ದಾನೆ. ಬಳಿಕ ಇಬ್ಬರೂ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದು, ಈ ಜನ್ಮದಲ್ಲಿ ಅಣ್ಣ-ತಂಗಿಯಾಗಿದ್ದೇವೆ. ಮುಂದಿನ ಜನ್ಮದಲ್ಲಿ ಪ್ರೇಮಿಗಳಾಗಿ ಹುಟ್ಟುತ್ತೇವೆ ಎಂದು ಬರೆದಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.







