ಶಿವಮೊಗ್ಗ: ಆಸ್ತಿಗಾಗಿ ಅಣ್ಣನನ್ನೇ ಇಬ್ಬರು ಸಹೋದರರು ಸೇರಿಕೊಂಡು ಕೊಲೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಚಿಪ್ಪಳ್ಳಿ ಹತ್ತಿರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಫಿಕ್ (45) ಸಹೋದರರಿಂದಲೇ ಹತ್ಯೆಯಾದ ದುರ್ದೈವಿ. ಆರೋಪಿಗಳಾದ ಇನಾಯತ್ ಮತ್ತು ಅಕ್ಕನ ಮಗ ಸಮೀರ್, ಕಾರು ಹತ್ತಿಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಈ ಘಟನೆ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿತ್ತು.
ತನಿಖೆ ಕೈಗೊಂಡಿದ್ದ ಪೊಲೀಸರಿಗೆ ಕಾರು ಹತ್ತಿಸಿ ಹತ್ಯೆ ಮಾಡಿರುವ ವಿಡಿಯೋ ಮೊಬೈಲ್ನಲ್ಲಿ ಸೆರೆಯಾಗಿದೆ. ಈ ಕುರಿತು ದೂರು ದಾಖಲಿಸಿಕೊಂಡು ತನಿಖೆ ನಡೆಸಿದಾಗ ವಿಚಾರ ಬೆಳಕಿಗೆ ಬಂದಿದೆ. ಆರೋಪಿಗಳು ಯಾರಿಗೂ ಗುರುತು ಸಿಗಬಾರದು ಎಂಬ ಕಾರಣಕ್ಕೆ ಮುರುಘಾ ಮಠದ ಆವರಣದಲ್ಲಿ ಬಟ್ಟೆ ಬದಲಿಸಿಕೊಂಡಿದ್ದರು. ಈ ದೃಶ್ಯವೆಲ್ಲವೂ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಸದ್ಯ ಆಸ್ತಿಗಾಗಿ ಕೊಲೆ ಮಾಡಿದ್ದೇವೆ ಎಂದು ಆರೋಪಿಗಳು ಹೇಳಿದ್ದಾರೆ.