ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ belagavi
ಬೆಳಗಾವಿ : ಕ್ಷುಲ್ಲಕ ಕಾರಣಕ್ಕೆ ಶುರುವಾದ ಸಹೋದರರ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿಯ ಲಕ್ಷ್ಮ ನಗರದಲ್ಲಿ ನಡೆದಿದೆ.
ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರ ನಿವಾಸಿ ಬಸವರಾಜ ತಳವಾರ (41) ಕೊಲೆಯಾದ ವ್ಯಕ್ತಿಯಾಗಿದ್ದು, ರಾಜು ತಳವಾರ (46) ಕೊಲೆ ಆರೋಪಿಯಾಗಿದ್ದಾನೆ.
ಸದ್ಯ ಕೊಲೆಗೆ ನಿಖರ ಕಾರಣ ಈವರೆಗೂ ತಿಳಿದುಬಂದಿಲ್ಲ ಆದರೂ, ಆಸ್ತಿ ವಿವಾದ ಹಾಗೂ ತಾಯಿಯ ಪಿಂಚಣಿ ಹಣದ ವಿಚಾರವಾಗಿ ಜಗಳ ನಡೆದಿದೆ ಎಂದು ಎನ್ನಲಾಗುತ್ತಿದ್ದು,ಪೊಲೀಸರ ತನಿಖೆ ನಂತರವಷ್ಟೇ ಸತ್ಯಾಸತ್ಯತೆ ತಿಳಿಯಲಿದೆ.
ಇನ್ನು ವಿಷಯ ತಿಳಿದು ಸ್ಥಳಕ್ಕೆ ವಡಗಾಂವ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ವಡಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









