ನವದೆಹಲಿ: ಡೆಲ್ಲಿ ಮದ್ಯ ನೀತಿ ಹಗರದಣದಲ್ಲಿ ಬಂಧಿಯಾಗಿರುವ ಬಿಆರ್ ಎಸ್ ನಾಯಕಿ ಕೆ.ಕವಿತಾ ಅವರನ್ನು 3 ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಲಾಗಿದೆ.
ದೆಹಲಿಯ ತಿಹಾರ್ ಜೈಲಿನಿಂದಲೇ ಕೆ.ಕವಿತಾ ಅವರನ್ನು ಸಿಬಿಐ ವಶಕ್ಕೆ ಪಡೆದಿತ್ತು. ನಂತರ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಕವಿತಾ ಅವರನ್ನು ಏ.15 ರ ವರೆಗೆ ಸಿಬಿಐ ಕಸ್ಟಡಿಗೆ ವಹಿಸಿ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಆದೇಶ ನೀಡಿತ್ತು. ಕವಿತಾ ಅವರನ್ನು ಇಡಿ ಹಣಕಾಸು ಹಗರಣದಲ್ಲಿ ಬಂಧಿಸಿತ್ತು. ಆದರೆ, ಈಗ ಸಿಬಿಐ ವಿಚಾರಣೆಗಾಗಿ ವಶಕ್ಕೆ ಪಡೆದಿದೆ.
ತಿಹಾರ್ ಜೈಲಿನಲ್ಲಿರುವಾಗಲೇ ಮತ್ತೊಂದು ಸಿಬಿಐ ಬಂಧಿಸಿದೆ. ಮದ್ಯದ ಪರವಾನಿಗೆಗಾಗಿ ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೆ 100 ಕೋಟಿ ರೂ. ಲಂಚ ನೀಡುವ ಸಂಬಂಧ ಸಾಕ್ಷಿ ಹೇಳಿಕೆಗಳು, ವಾಟ್ಸಾಪ್ ಚಾಟ್ಗಳು ಮತ್ತು ಹಣಕಾಸಿನ ದಾಖಲೆಗಳು ಅವರನ್ನು ಸಂಚು ರೂಪಿಸಿದವರಲ್ಲಿ ಪ್ರಮುಖರೆಂದು ವಾದಿಸಿ, ಐದು ದಿನಗಳ ಕಾಲ ಕವಿತಾರನ್ನು ಸಿಬಿಐ ವಶಕ್ಕೆ ಪಡೆದಿದೆ.