ಬೆಳಗಾವಿ ಜಿಲ್ಲೆ ವಡ್ಡರವಾಡಿಯಲ್ಲಿ ವೇಶ್ಯಾವಾಟಿಕೆ ಆರೋಪ ಹೊರಿಸಿ, ಮಹಿಳೆಯೊಬ್ಬರ ಮೇಲೆ ಹಲ್ಲೆ ಮಾಡಿ, ಸಾರ್ವಜನಿಕವಾಗಿ ಅವಳ ಬಟ್ಟೆ ಹರಿದು ಹಾಕಿದ ಅಮಾನವೀಯ ಘಟನೆ ನಡೆದಿದೆ. ನೆರೆ ಮನೆಯವರೇ ಈ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದ್ದು, ಘಟನೆ ವಿಡಿಯೊದಲ್ಲಿ ಸೆರೆಯಾಗಿದೆ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಮಿಷನರ್ನ ಸೂಚನೆಯಂತೆ ಮೂವರ ವಿರುದ್ಧ FIR ದಾಖಲಾಗಿದೆ. ಹಲ್ಲೆಗಾರರು ಮನೆಗೆ ನುಗ್ಗಿ ಅಮ್ಮ ಮತ್ತು ಮಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದೆ.
ಸಂಬಂಧ ಇಲ್ಲದ ವ್ಯಕ್ತಿಗಳು ಆ ಮಹಿಳೆಯರ ಮನೆಗೆ ಬಂದು ಹೋಗುತ್ತಾರೆ ಎಂದು ಹಲ್ಲೆ ಮಾಡಿದವರು ಆರೋಪಿಸಿದ್ದು, ಮಹಿಳೆಯರು ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದಾರೆ ಎಂದು ತಾಯಿ-ಮಗಳನ್ನ ಮನೆ ಬಿಡಿಸಲು ನೆರೆಮನೆಯವರು ಜಗಳ ತೆಗೆದಿದ್ದಾರೆ. ಪರಿಣಾಮವಾಗಿ, ಜಗಳ ವಿಕೋಪಕ್ಕೆ ತಿರುಗಿದ್ದು, ಸಾರ್ವಜನಿಕವಾಗಿ ಮಹಿಳೆಯ ಬಟ್ಟೆ ಹರಿದು ಹಾಕಿ ಹಲ್ಲೆ ಮಾಡಲಾದ ಆಘಾತಕಾರಿ ಘಟನೆ ನಡೆದಿದೆ. ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.