Murder | ಪಾರ್ಟಿಗೆ ಕರೆದು ವ್ಯಕ್ತಿಯ ಬರ್ಬರ ಕೊಲೆ
ಕಲಬುರಗಿ : ಸ್ನೇಹಿತರ ಜೊತೆ ಪಾರ್ಟಿಗೆ ಹೋಗಿದ್ದ ವ್ಯಕ್ತಿಯನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿಯ ಸಿದನೂರು ಹೊರವಲಯದಲ್ಲಿ ನಡೆದಿದೆ.
ಶಿವಶರಣಪ್ಪ ಕೊಲೆಗೀಡಾದ ವ್ಯಕ್ತಿಯಾಗಿದ್ದು, ಈತ ಬಸ್ ಚಾಲಕರಾಗಿದ್ದರು.
ದುಷ್ಕರ್ಮಿಗಳು ಶಿವಶರಣಪ್ಪ ಅವರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ.
ಕೊಲೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ.
ಆರೋಪಿಗಳು ಶಿವಶರಣಪ್ಪ ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದು, ಸ್ಥಳೀಯರು ರೇವೂರು ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಧಾವಿಸಿದ ರೇವೂರು ಪೊಲೀಸರು ಪರಿಶೀಲನೆ ನಡೆಸಿ ಮೃತ ದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.
ಇನ್ನು ಈ ಸಂಬಂಧ ರೇವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.