ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ನಗರದ ಕಾಟನ್ ಪೇಟೆ ಫ್ಲವರ್ ಗಾರ್ಡನ್ನಲ್ಲಿ ನಡೆದಿದೆ. ಶಿವ ಕೊಲೆಯಾದ ರೌಡಿಶೀಟರ್ ಎನ್ನಲಾಗಿದೆ. ರೌಡಿಶೀಟರ್ ಶಿವನನ್ನು ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಕಾಟನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.