ಬೆಂಗಳೂರು : ಪ್ರಧಾನಮಂತ್ರಿಗಳು ಇಂದು ಕೃಷಿ ಮೂಲ ಸೌಕರ್ಯ ಅಭಿವೃದ್ಧಿ ನಿಧಿಯಡಿ 1 ಲಕ್ಷ ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಈ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರ್ನಾಟಕದ ರೈತರ ಪರವಾಗಿ ಪ್ರಧಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ರಾಜ್ಯದ ಸುಮಾರು 52.50 ಲಕ್ಷ ಕೃಷಿ ಕುಟುಂಬಗಳಿಗೆ ಲಾಭದಾಯಕವಾಗಿರುವ ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ, ಈ ವರ್ಷದ ಮೂರು ಕಂತುಗಳಲ್ಲಿ ಮೊದಲ ಕಂತಿನ ಮೊತ್ತ 1,049 ಕೋಟಿ ರೂ. ಬಿಡುಗಡೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಕರ್ನಾಟಕದ ರೈತರ ಪರವಾಗಿ ಧನ್ಯವಾದ ಅರ್ಪಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.
ರಾಜ್ಯದ ಸುಮಾರು 52.50 ಲಕ್ಷ ಕೃಷಿ ಕುಟುಂಬಗಳಿಗೆ ಲಾಭದಾಯಕವಾಗಿರುವ ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ಈ ವರ್ಷದ ಮೂರು ಕಂತುಗಳಲ್ಲಿ ಮೊದಲ ಕಂತಿನ ಮೊತ್ತ 1049 ಕೋಟಿ ರೂ. ಬಿಡುಗಡೆ ಮಾಡಿರುವ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಕರ್ನಾಟಕದ ರೈತರ ಪರವಾಗಿ ಧನ್ಯವಾದ ಅರ್ಪಿಸುತ್ತೇನೆ. #AatmaNirbharKrishi@narendramodi @nstomar pic.twitter.com/x34mKHi06T
— B.S.Yediyurappa (@BSYBJP) August 9, 2020







