ಇನ್ನೂ 2-3 ದಿನಗಳಲ್ಲಿ ಸಂಪುಟ ವಿಸ್ತರಣೆ : ಬಿ.ಎಸ್. ಯಡಿಯೂರಪ್ಪ
ಬೆಂಗಳೂರು: ಇನ್ನೂ 2-3 ದಿನಗಳಲ್ಲಿ ಸಂಪುಟ ವಿಸ್ತರಣೆ ನಿಶ್ಚಿತವಾಗಿ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಬಂದಿದ್ದು, ಆದರೆ ನಾನಿನ್ನು ಅವರನ್ನು ಭೇಟಿ ಮಾಡಿಲ್ಲ. ಆದರೆ ಸಂಪುಟ ವಿಸ್ತರಣೆಯ ಬಗ್ಗೆ ನಿಶ್ಚಿತವಾದ ತೀರ್ಮಾನ ತೆಗೆದುಕೊಂಡೆ ಅಮಿತ್ ಶಾ ರಾಜ್ಯಕ್ಕೆ ಬಂದಿದ್ದಾರೆ ಎಂದುಕೊಂಡಿದ್ದೇನೆ ಎಂದು ಹೇಳಿದರು.
ಇನ್ನೂ ಸಂಪುಟ ವಿಸ್ತರಣೆ ಬಗ್ಗೆ ದೆಹಲಿಗೆ ಹೋಗಿ ಮೋದಿ ಅವರ ಜೊತೆ ಚರ್ಚಿಸಿ ತೀರ್ಮಾನ ಮಾಡಬಹುದು. ನಂತರ ಆದಷ್ಟು ಬೇಗ ಕ್ಯಾಬಿನೆಟ್ ವಿಸ್ತರಣೆ ಆಗುತ್ತದೆ ಎಂದು ಹೇಳಿದ್ದಾರೆ.
ಅಲ್ಲದೇ ಸಿಎಂ ಬದಲಾವಣೆಯ ಯಾವುದೇ ಸುದ್ದಿಯಿಲ್ಲ. ಅದೆಲ್ಲವೂ ಊಹಾಪೋಹ ಎಂದು ಸ್ಪಷ್ಟಪಡಿಸಿದರು.