ಬೆಂಗಳೂರು : ಕೊರೊನಾ ಕಾಟದ ನಡುವೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚೆರ್ಚೆಗಳು ಆರಂಭವಾಗಿದ್ದು, ಗಣೇಶ ಚತುರ್ಥಿ ಆಸುಪಾಸಿನಲ್ಲಿ ಮುಹೂರ್ತ ಕೂಡಿಬರುವ ಸಾಧ್ಯತೆ ಇದೆ. ಕೆಲ ಸಚಿವಾಕಾಂಕ್ಷಿಗಳು ಕೂಡ ಇದೇ ಮಾತು ಹೇಳುತ್ತಿದ್ದು, ಮಂತ್ರಿ ಪಟ್ಟಕ್ಕಾಗಿ ಭಾರಿ ಕಸರತ್ತು ನಡೆಸುತ್ತಿದ್ದಾರೆ. ಇದು ಒಂದು ಕಡೆಯಾದ್ರೆ ಕೆಲ ಹಾಲಿ ಸಚಿವರು ತಮ್ಮ ಸ್ಥಾನ ಉಳಿಸಿಕೊಳ್ಳಲು ದೆಹಲಿ ಮಟ್ಟದಲ್ಲಿ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದಾರೆ.
ಮೂವರಿಗೆ ಮಾತ್ರ ಪಟ್ಟ..?
ಮೂಲಗಳ ಪ್ರಕಾರ ಈ ಬಾರಿ ಸಂಪುಟ ವಿಸ್ತರಣೆ ಆದರೇ ಪಕ್ಷದಲ್ಲಿ ದೊಡ್ಡ ಮಟ್ಟ ಅಸಮಾಧಾನ ಭುಗಿಲೇಳುವ ಸಾಧ್ಯತೆ ಇದೆ. ಈಗಾಗಲೇ ಪಕ್ಷದಲ್ಲಿ ಅಸಮಾಧಾನದ ಹೊಗೆ ಕಾಣಿಸಿಕೊಂಡಿದ್ದು, ಸಚಿವಾಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ. ಈ ಹಿನ್ನೆಲೆ ಸಿಎಂ ಬಿ.ಎಸ್ ಯಡಿಯೂರಪ್ಪ ಮೂವರಿಗೆ ಮಾತ್ರ ಮಂತ್ರಿ ಪಟ್ಟ ನೀಡಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.
ಯಾರಿಗೆ ಮಂತ್ರಿ ಸ್ಥಾನ..?
ಬಿಎಸ್ ವೈ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಸಚಿವರಾದ ಎಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಮತ್ತು ಆರ್.ಶಂಕರ್ ರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಿದ್ದಾರೆ. ಇದಕ್ಕೆ ಹೈಕಮಾಂಡ್ ಕೂಡ ಹಸಿರು ನಿಶಾನೆ ತೋರಿದೆ ಎಂದು ಮೂಲಗಳು ತಿಳಿಸಿವೆ.