ಬಿ.ಎಸ್.ಯಡಿಯೂರಪ್ಪ ಓರ್ವ ಕೆಟ್ಟ ಮುಖ್ಯಮಂತ್ರಿ : ಸಿದ್ದರಾಮಯ್ಯ ಗುಡುಗು
ಬೆಂಗಳೂರು : ಬಿ.ಎಸ್.ಯಡಿಯೂರಪ್ಪ ಓರ್ವ ಕೆಟ್ಟ ಮುಖ್ಯಮಂತ್ರಿ. ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಬೇಕು ಎಂಬ ಯತ್ನ ಬಹಳ ಹಿಂದಿನಿಂದ ನಡೆಯುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಿಎಂ ರಾಜೀನಾಮೆ ಹೇಳಿಕೆ ಬಗ್ಗೆ ನಗರದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ.
ಇದು ಹೈಕಮಾಂಡ್ ಗಮನಕ್ಕೂ ಬಂದಿದೆ. ಈಗ ರಾಜೀನಾಮೆ ಕೊಡಬೇಕಾಗುತ್ತೆ ಎಂದು ಹೊಸ ನಾಟಕವಾಡಿ ತಾನು ಪ್ರಾಮಾಣಿಕ ಎಂಬ ರೀತಿ ತೋರಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಟೀಕಿಸಿದ್ರು.
ಅಲ್ಲದೆ ಮು ಬಿಎಸ್ವೈ ಓರ್ವ ಕೆಟ್ಟ ಸಿಎಂ. ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಬೇಕು ಎಂಬ ಯತ್ನ ಬಹಳ ಹಿಂದಿನಿಂದ ನಡೆಯುತ್ತಿದೆ.
ಆದರೆ ಅಧಿಕಾರ ಉಳಿಸಿಕೊಳ್ಳಲು ಹೈಕಮಾಂಡ್ ಮನವೊಲಿಸಲು ನೋಡುತ್ತಿದ್ದಾರೆ. ಹೀಗಾಗಿ ರೇಣುಕಾಚಾರ್ಯನನ್ನು ಮುಂದೆ ಬಿಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಇದೇ ವೇಳೆ ಮೈಸೂರಿನಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳ ಜಟಾಪಟಿ ವಿಚಾರದ ಬಗ್ಗೆಯೂ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಒಬ್ಬ ಎಂಪಿಯಾಗಿ ಅಧಿಕಾರಿಗಳ ಬೆಂಬಲಿಸೋದು ಅಥವಾ ವಿರೋಧಿಸೋದು ಸರಿಯಾ ಎಂದು ಪ್ರತಾಪ್ ಸಿಂಹ ಅವರನ್ನ ಪ್ರಶ್ನಿಸಿದರು.
ಅವರದೇ ಸರ್ಕಾರ ಇದೆ. ಅಲ್ಲದೆ ಅವರು ಎಂಪಿ, ಮಾನ ಮರ್ಯಾದೆ ಇರೋರು ಹೀಗೆಲ್ಲ ಮಾಡಲ್ಲ. ಮೈಸೂರು ಜಿಲ್ಲೆಯಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳು ಕಿತ್ತಾಡಿಕೊಂಡಿದ್ದಾರೆ.
ಈ ಕಿತ್ತಾಟಕ್ಕೆ ಬಿಜೆಪಿಯ ಚುನಾಯಿತ ಪ್ರತಿನಿಧಿಗಳು ಹಾಗೂ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಕಾರಣ. ಈ ಬಗ್ಗೆ ಸೂಕ್ತ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.