ನಾಯಕತ್ವ ಬದಲಾವಣೆ ಆಟಕ್ಕೆ ರಾಜಾಹುಲಿ ಬುಸ್ ಬುಸ್
ಬೆಂಗಳೂರು : ಕೊರೊನಾ ಸಂಕಷ್ಟದ ಮಧ್ಯೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಮಾತ್ರ ನಿಲ್ಲುತ್ತಿಲ್ಲ.
ರಾಜ್ಯ ರಾಜಕಾರಣದಲ್ಲಿ ದಿಢೀರ್ ಬೆಳವಣಿಗೆಗಳು ನಡೆಯುತ್ತಿದ್ದು, ಸಿಎಂ ಬದಲಾವಣೆ ಬಗ್ಗೆ ಬಿಸಿ ಬಿಸಿ ಚರ್ಚೆಗಳು ನಡೆಯುತ್ತಿವೆ.
ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಫುಲ್ ಗರಂ ಆಗಿದ್ದಾರೆ.
ನಾಯಕತ್ವ ಬದಲಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸಿಎಂ ಬಿ.ಎಸ್.ಯಡಿಯೂರಪ್ಪ, ಸದ್ಯಕ್ಕೆ ನನ್ನ ಆದ್ಯತೆ ಕೋವಿಡ್ ನಿಯಂತ್ರಣಕ್ಕಷ್ಟೇ ಆಗಿದೆ.
ಜನರ ಹಿತ ಕಾಪಾಡುವುದೇ ನನ್ನ ಮೊದಲ ಆದ್ಯತೆ. ಬೇರೆ ವಿಷಯ ನನ್ನ ಮುಂದೆ ಇಲ್ಲ. ದೆಹಲಿಗೆ ಹೋಗಿ ಬಂದವರಿಗೆ ಈಗಾಗಲೇ ಉತ್ತರ ಸಿಕ್ಕಿದೆ.
ಕೋವಿಡ್ ಎದುರಿಸುವುದು ಮೊದಲ ಕೆಲಸ. ಬೇರೆ ಯಾವುದರ ಬಗ್ಗೆಯೂ ನನ್ನ ಗಮನ ಇಲ್ಲ.
ಒಟ್ಟಾಗಿ ಸಚಿವರು, ಶಾಸಕರು ಕೋವಿಡ್ ಎದುರಿಸಬೇಕು ಎಂದು ಹೇಳುವ ಮೂಲಕ ತಮ್ಮ ವಿರೋಧಿಗಳಿಗೆ ಟಕ್ಕರ್ ಕೊಟ್ಟಿದ್ದಾರೆ.
ಇನ್ನು ಶಾಸಕಾಂಗ ಪಕ್ಷದ ಸಭೆ ನಡೆಸುವ ವಿಚಾರದ ಬಗ್ಗೆ ಕೇಳಿದಾಗ ಇದರ ಬಗ್ಗೆ ನಿಮ್ಮ ಜೊತೆ ಚರ್ಚಿಸುವ ಅಗತ್ಯ ಇಲ್ಲ ಎಂದು ಬುಸುಗುಟ್ಟಿದ್ದಾರೆ.