ನಾನು ರೈತನ ಮಗ, ರೈತಪರವಾಗಿಯೇ ಇರುತ್ತೇನೆ : ಸಿಎಂ
ಬೆಂಗಳೂರು : ನಾನೂ ಕೂಡ ರೈತನ ಮಗನಾಗಿದ್ದು, ರೈತರ ಸಂಕಷ್ಟ ತಿಳಿದಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ದೇಶದಲ್ಲಿ ರೈತರ ಹೋರಾಟ ತೀವ್ರಗೊಂಡಿದೆ. ದೇಶಕ್ಕೆ ಅನ್ನ ನೀಡುವ ಅನ್ನದಾತ ಇದೀಗ ರಸ್ತೆಗಿಳಿದು ಸರ್ಕಾರದ ವಿರುದ್ಧ ಸಮರ ಸಾರಿದ್ದಾನೆ. ನೂತನ ಕೃಷಿ ಮಸೂದೆಗಳನ್ನು ವಿರೋಧಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದಲ್ಲೂ ಕೂಡ ರೈತರ ಹೋರಾಟ ಮುಂದುವರಿದಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿವಿಧ ರೈತ ಸಂಘಟನೆಗಳು ಪ್ರತಿಭನಟೆ ನಡೆಸುತ್ತಿವೆ. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ರೈತರನ್ನು ದಾರಿ ತಪ್ಪಿಸುವ ಕೆಲಸವನ್ನು ಯಾರೂ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಕುಮಾರಸ್ವಾಮಿ ಅವರೇ ಬಡಾಯಿ ಕೊಚ್ಚಿಕೊಳ್ಳೋದನ್ನ ನಿಲ್ಲಿಸಿ : ಎಸ್.ಆರ್ ಪಾಟೀಲ್
ರೈತರ ಪ್ರತಿಭಟನೆಗಳ ಬಗ್ಗೆ ಟ್ವೀಟ್ ಮಾಡಿರುವ ಅವರು, ಹೋರಾಟದಿಂದಲೇ ನಾನು ಇವತ್ತು ಈ ಸ್ಥಾನದಲ್ಲಿದ್ದೇನೆ. ನಾನೂ ಕೂಡ ರೈತನ ಮಗನಾಗಿದ್ದು, ರೈತರ ಸಂಕಷ್ಟ ತಿಳಿದಿದೆ. ಸದಾಕಾಲ ರೈತಪರವಾಗಿಯೇ ಇರುತ್ತೇನೆ. ನಮ್ಮ ಅನ್ನದಾತ ರೈತರಿಗೆ ಅನ್ಯಾಯವಾಗಲು ನಾನು ಅವಕಾಶ ನೀಡುವುದಿಲ್ಲ. ರೈತರ ಸಂಶಯಗಳನ್ನು ಸರ್ಕಾರ ಪರಿಹರಿಸಲಿದೆ. ನನ್ನ ವಿನಂತಿಯಿಷ್ಟೇ, ರೈತರನ್ನು ದಾರಿ ತಪ್ಪಿಸುವ ಕೆಲಸವನ್ನು ಯಾರೂ ಮಾಡಬೇಡಿ ಎಂದು ಬರೆದುಕೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel