ಜ.1ರಿಂದ ಶಾಲೆ ಆರಂಭ ನಿರ್ಧಾರದಲ್ಲಿ ಬದಲಾವಣೆ ಇಲ್ಲ : ಸಿಎಂ
ಬೆಂಗಳೂರು : ಜನವರಿ ಒಂದರಿಂದ ಶಾಲೆಗಳನ್ನು ಆರಂಭಿಸುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಜನವರಿ ಒಂದರಿಂದ ಶಾಲೆಗಳನ್ನು ಆರಂಭಿಸುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ಆದರೂ ಈ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಮತ್ತೊಮ್ಮೆ ತೀರ್ಮಾನ ಮಾಡ್ತೇವೆ ಎಂದು ತಿಳಿಸಿದರು.
ಇದೇ ರೂಪಾಂತರ ಕೊರೊನಾ ವೈರಸ್ ಬಗ್ಗೆ ಮಾತನಾಡಿ, ಕೊರೊನಾ ರೂಪಾಂತರ ವೈರಸ್ ಬಗ್ಗೆ ಆತಂಕ ಪಡುವಂತದ್ದು ಏನು ಇಲ್ಲ. ಇದರಿಂದ ಸಮಸ್ಯೆ ಆಗಿಲ್ಲ. ಇದುವರೆಗೂ ರಾಜ್ಯದಲ್ಲಿ ಯಾವುದೇ ಸಮಸ್ಯೆ ಆಗಿಲ್ಲ ಎಂದರು.
ಇನ್ನು ಗ್ರಾಮ ಪಂಚಾಯತಿ ಚುನಾವಣೆ ಬಗ್ಗೆ ಮಾತನಾಡಿ ಶೇ 80-95 ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲ್ಲೋದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಧಿಕಾರ ವಿಕೇಂದ್ರೀಕರಣ ಸಂದರ್ಭದಲ್ಲಿ ಹಲವು ವಿದ್ಯಾವಂತರು ಗ್ರಾಮ ಪಂಚಾಯತಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್ ನ ಯಾವುದೇ ನಾಯಕರು ಇದರಲ್ಲಿ ಆಸಕ್ತಿ ವಹಿಸಿರಲಿಲ್ಲ ಎಂದು ದೂರಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









