Davangere: ಹುಬ್ಬಳ್ಳಿಯಲ್ಲಿ ಗಲಭೆ ಮಾಡಿದವರನ್ನು ಕಾಂಗ್ರೆಸ್ ನಾಯಕರು ಪ್ರೋತ್ಸಾಹಿಸುತ್ತಿದ್ದಾರೆ : ಬಿ.ಎಸ್.ವೈ

1 min read
Yadiyurappa Saaksha Tv

ಹುಬ್ಬಳ್ಳಿಯಲ್ಲಿ ಗಲಭೆ ಮಾಡಿದವರನ್ನು ಕಾಂಗ್ರೆಸ್ ನಾಯಕರು ಪ್ರೋತ್ಸಾಹಿಸುತ್ತಿದ್ದಾರೆ : ಬಿ.ಎಸ್.ವೈ

ದಾವಣಗೆರೆ: ಹುಬ್ಬಳ್ಳಿಯಲ್ಲಿ ಗಲಭೆ ಮಾಡಿದವರನ್ನು ಕಾಂಗ್ರೆಸ್ ನಾಯಕರು ಪ್ರೋತ್ಸಾಹಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹುಬ್ಬಳ್ಳಿ ಗಲಭೆ ವೇಳೆ ಕಲ್ಲು ತೂರಾಟದಲ್ಲಿ ಮುಸ್ಲಿಂ ನಾಯಕ ಅಲ್ತಾಫ್ ಹಳ್ಳೂರು ಭಾಗಿ ಆಗಿರುವುದು ಜಗಜ್ಜಾಹೀರವಾಗಿದೆ. ಆದರೆ ಕಾಂಗ್ರೆಸ್ ನಾಯಕರು ಅಮಾಯಕರನ್ನು ಬಂಧಿಸಬೇಡಿ ಎನ್ನುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗಲಭೆ ಮಾಡಿದವರನ್ನು ಕಾಂಗ್ರೆಸ್ ನಾಯಕರು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Siddaramaiah Saaksha Tv

ಅಲ್ಲದೇ ಸಿದ್ದರಾಮಯ್ಯನವರಿಗೆ ಇದು ಶೋಭೆ ತರುವ ಕೆಲಸ ಅಲ್ಲ. ವಿರೋಧ ಪಕ್ಷದ ನಾಯಕರಾಗಿ ಈ ರೀತಿ ಮಾತನಾಡಬಾರದು. ಅವರು ಸ್ಥಳಕ್ಕೆ ಹೋಗಿ ನೋಡಬೇಕು. ವಾಸ್ತವ ಸ್ಥಿತಿ ನೋಡಿ ಮಾತನಾಡಲಿ. ಇನ್ನೂ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಈ ರೀತಿ ಘಟನೆ ನಡೆದಾಗ ಸೂಕ್ತ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದರು.

ದಿಂಗಲೇಶ್ವರ ಶ್ರೀ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಈಗಾಗಲೇ ಸಿಎಂ ಹೇಳಿಕೆ ನೀಡಿದ್ದಾರೆ. ಒಬ್ಬ ಸ್ವಾಮೀಜಿ ಆದವರು ಈ ರೀತಿಯಾಗಿ ಹೇಳುವುದು ಶೋಭೆ ತರುವುದಲ್ಲ. ಈಶ್ವರಪ್ಪ ಅದಷ್ಟು ಬೇಗ ಆರೋಪ ಮುಕ್ತರಾಗಿ ಬರುತ್ತಾರೆ. ಅವರು ಯಾವ ತಪ್ಪು ಮಾಡಿಲ್ಲ ಎನ್ನುವ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇತ್ತೀಚೆಗೆ ಪರೀಕ್ಷೆ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಮಾತನಾಡಿ, ರಾಜ್ಯದಲ್ಲಿ ಕೋಮು ಸಾಮರಸ್ಯ ಕದಲುವ ಯತ್ನ ನಡೆಯುತ್ತಿವೆ. ಮೊದಲು ರಾಜ್ಯದಲ್ಲಿ ಕೋಮು ಸಾಮರಸ್ಯ ಇತ್ತು. ಈಗಲೂ ಕೂಡಾ ರಾಜ್ಯದಲ್ಲಿ ಸಾಮರಸ್ಯ ಇದೆ. ಆದರೆ ಕೆಲವರು ಉದ್ದೇಶ ಪೂರ್ವಕವಾಗಿ ಸಾಮರಸ್ಯಕ್ಕೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd