ಬಿಎಸ್ ವೈ ಹಾಗೂ ಬೊಮ್ಮಾಯಿ ದೂರದೃಷ್ಠಿ ಚಿಂತನೆ ಉಳ್ಳವರು : ಸೋಮಣ್ಣ Somanna saaksha tv
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದೂರದೃಷ್ಠಿ ಚಿಂತನೆ ಉಳ್ಳವರಾಗಿದ್ದಾರೆ.
ಸರ್ಕಾರ ನಿಂತ ನೀರಲ್ಲ ಹರಿಯುವ ನೀರು ಎಂಬೋದನ್ನ ತೋರಿಸಿಕೊಟ್ಟಿದ್ದಾರೆ ಎಂದು ಮೂರು ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶದ ಬಗ್ಗೆ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ಮೂರು ಮಹಾನಗರ ಪಾಲಿಕೆ ಚುನಾವಣೆಗಳ ಫಲಿತಾಂಶ ಹೊರಬಿದ್ದಿದ್ದು, ಮೂರು ಪಾಲಿಕೆಗಳಲ್ಲಿ ಬಿಜೆಪಿ ಗದ್ದುಗೆ ಹಿಡಿಯೋದು ಪಕ್ಕಾ ಆಗಿದೆ.
ಈ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಣ್ಣ, ಪಾಲಿಕೆ ಚುನಾವಣೆಯಲ್ಲಿ ಬೇರೆ ಬೇರೆ ಪಕ್ಷದವರು ಯಾವ ರೀತಿ ಹೇಳಿದರೂ ಅದೆಲ್ಲದಕ್ಕೆ ಜನ ಉತ್ತರ ಕೊಟ್ಟಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಇದೇ ವೇಳೆ ಪಕ್ಷದಲ್ಲಿ ಬಿಎಸ್ ವೈ ಅವರನ್ನು ಕಡೆಗಣಿಸಲಾಗುತ್ತಿದೆ ಎಂಬ ವಿಚಾರವಾಗಿ ಮಾತನಾಡಿ, ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗುತ್ತಿದೆ ಎನ್ನುವುದು ಸರಿಯಲ್ಲ. ಅನಗತ್ಯವಾಗಿ ಗೊಂದಲ ಸೃಷ್ಟಿಸುವುದು ಬೇಡ. ಯಡಿಯೂರಪ್ಪನವರಿಗೆ ಯಡಿಯೂರಪ್ಪನವರೇ ಸಾಟಿ ಎಂದರು.