ಋಣ ತೀರಿಸಲು ಮುಂದಾದ ಸಿಎಂ : ಶಾಸಕ ಎನ್.ಮಹೇಶ್ ಗೆ ಮಂತ್ರಿಪಟ್ಟ..?
ಚಾಮರಾಜನಗರ : ಕೊಳ್ಳೇಅಗಾಲ ಶಾಸಕ ಎನ್. ಮಹೇಶ್ ಅವರಿಗೆ ಸಚಿವಸ್ಥಾನ ಸಿಗುವ ಸಾಧ್ಯತೆಗಳು ದಟ್ಟವಾಗಿ ಕಾಣುತ್ತಿವೆ.
ಸಂಪುಟ ವಿಸ್ತರಣೆಗೆ ಈಗಾಗಲೇ ಪಕ್ಷದ ಬಿಗ್ ಬಾಸ್ ಗಳಿಂದ ಒಪ್ಪಿಗೆ ಬಂದಿರುವ ಸಿಎಂ ಇದೇ ತಿಂಗಳ 13 ಅಥವಾ 14 ರಂದು ಸಂಪುಟ ವಿಸ್ತರಣೆ ಆಗಲಿದೆ ಎಂದು ತಿಳಿಸಿದ್ದಾರೆ.
ಈ ಮಧ್ಯೆ ಬಿಎಸ್ ಪಿ ಉಚ್ಚಾಟಿತ ಶಾಸಕ ಎನ್.ಮಹೇಶ್ ಕೂಡ ಸಚಿವರಾಗ್ತಾರೆ ಅನ್ನೋ ಸುದ್ದಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ನಾನೇ ಕಾರಣ : ಹೆಚ್.ನಾಗೇಶ್
ಸಂಪುಟ ವಿಸ್ತರಣೆ ಬಗ್ಗೆ ಇಂದು ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಬಿಎಸ್ ವೈ, ಏಳು ಮಂದಿ ಸಚಿವರಾಗುತ್ತಾರೆ ಎಂಬ ಮಾಹಿತಿಯನ್ನ ನೀಡಿದರು.
ಹೀಗಾಗಿ ಸಚಿವಾಕಾಂಕ್ಷಿಗಳು ಸಿಎಂ ನಿವಾಸದತ್ತ ತಮ್ಮ ಕಾರುಗಳನ್ನು ತಿರುಗಿಸಿದ್ದಾರೆ. ಇದರ ಮಧ್ಯೆ ಸಿಎಂ ಹೆಚ್.ನಾಗೇಶ್ ಗೆ ಕೋಕ್ ಕೊಟ್ಟು ಎನ್ ಮಹೇಶ್ ಗೆ ಸಚಿವಸ್ಥಾನ ನೀಡ್ತಾರೆ ಅನ್ನೋ ಮಾತುಗಳು ಹರಿದಾಡುತ್ತಿವೆ.
ಇದಕ್ಕೆ ಪುಷ್ಠಿ ನೀಡುವ ರೀತಿ ಚಾಮರಾಜನಗರಲದಲ್ಲಿ ನಡೆಯಲಿರುವ ಬಿಜೆಪಿ ಜನಸೇವಕ ಸಮಾವೇಶದಲ್ಲಿ ಭಾಗವಹಿಸುವ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರು ಹಾಗೂ ಮುಖಂಡರಿಗೆ ಸ್ವಾಗತ ಕೋರುವ ಫ್ಲೆಕ್ಸ್‍ನಲ್ಲಿ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರ ಫೋಟೊವೂ ಕಂಡು ಬಂದಿದೆ. ಇದು ಎನ್ ನಾಗೇಶ್ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಹಾಗೇ ಅವರು ಸಚಿವರಾಗುತ್ತಾರೆ ಎಂಬ ಊಹಾಪೋಹಕ್ಕೆ ಮತ್ತಷ್ಟು ಬಲ ತುಂಬಿದೆ.
ಇನ್ನು ಸಚಿವಸ್ಥಾನದ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಎನ್ ನಾಗೇಶ್, ಸಚಿವ ಸ್ಥಾನದ ಆಕಾಂಕ್ಷೆ ಯಾರಿಗೆ ಇರೋಲ್ಲ ಹೇಳಿ..? ಸಚಿವ ಸ್ಥಾನ ಕೊಟ್ಟರೆ ಉತ್ತಮ ಕೆಲಸ ಮಾಡುತ್ತೇನೆ. ಆದ್ರೆ ಕೊಡೋದು ಬಿಡೋದು ಅವರಿಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









