ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾಸುರನಾ ಆರ್ಭಟ ಹೆಚ್ಚಾಗಿದೆ. ಹಾಗಾಗಿ ಕೊರೊನಾ ಸೋಂಕು ನಿಯಂತ್ರಣ ಮಾಡಲು ರಾಜ್ಯ ಸರ್ಕಾರ ಹರಸಾಹಸ ಪಡುತ್ತಿದೆ. ಅಲ್ಲದೆ ಲಾಕ್ ಡೌನ್ ಮಾಡಬೇಕೊ ಬೇಡವೊ ಎಂಬ ಗೊಂದಲದಲ್ಲಿ ಸರ್ಕಾರವಿದೆ. ಈ ಹಿನ್ನೆಲೆಯಲ್ಲಿ ಚರ್ಚೆ ನಡೆಸಲು ನಾಳೆ ಬೆಳಿಗ್ಗೆ 11 ಗಂಟೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ವಪಕ್ಷ ಸಭೆ ಕರೆದಿದ್ದಾರೆ.
ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಲಾಕ್ ಡೌನ್ ಒಂದೇ ದಾರಿಯಾ ಅಥಾವ ಬೇರೆ ಮಾರ್ಗಗಳು ಇದ್ದಾವ, ಒಂದು ವೇಳೆ ಲಾಕ್ ಡೌನ್ ಮಾಡಿದರೂ ಅದು ಇಡಿ ರಾಜ್ಯವಾಪಿ ಲಾಕ್ ಡೌನ್ ಮಾಡಬೇಕಾ ಅಥಾವ ಬೆಂಗಳೂರನ್ನು ಮಾತ್ರ ಲಾಕ್ ಡೌನ್ ಮಾಡಬೇಕಾ ಎಂಬ ಗೊಂದಲದಲ್ಲಿ ಸರ್ಕಾರವಿದೆ. ಆ ಹಿನ್ನೆಲೆಯಲ್ಲಿ ನಾಳೆ ಸರ್ವಪಕ್ಷ ಸಭೆ ಕರೆದು ವಿರೋಧ ಪಕ್ಷಗಳ ಅಭಿಪ್ರಾಯ ಸಂಗ್ರಹ ಮಾಡಲು ಮುಂದಾಗಿದೆ.
ಒಟ್ಟಾರೆಯಾಗಿ ಕೊರೊನಾ ನಿಯಂತ್ರಣಕ್ಕೆ ಯಾವೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು, ಜೊತೆ ಆರ್ಥಿಕ ಸಂಕಷ್ಟದಿಂದ ರಾಜ್ಯವನ್ನು ಪಾರು ಮಾಡಬೇಕು ಎಂಬ ಲೆಕ್ಕಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.