ಬೆಂಗಳೂರು : ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಇಂದು ಮಂಡಿಸಿದ ಬಜೆಟ್ ನಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಬೇಡಿಕೆಯೊಂದನ್ನು ಈಡೇರಿಸಿದ್ದಾರೆ. ಅದುವೇ ಬೆಂಗಳೂರಿನಲ್ಲಿ ಜಾಗತಿಕ ಮಟ್ಟದ ಫಿಲಂ ಸಿಟಿ ನಿರ್ಮಾಣ.
ಹೌದು..! ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಭಾಗವಹಿಸಿದ್ದ ರಾಕಿಂಗ್ ಸ್ಟಾರ್ ಯಶ್ ಬೆಂಗಳೂರಿನಲ್ಲಿ ಅತ್ಯುತ್ತಮ ಮಟ್ಟದ ಫಿಲಂ ಸಿಟಿಯನ್ನು ನಿರ್ಮಿಸುವಂತೆ ಮುಖ್ಯಮಂತ್ರಿಗಳ ಬಳಿ ಕೇಳಿಕೊಂಡಿದ್ದರು. ಇದೀಗ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಬಜೆಟ್ ನಲ್ಲಿ ಬೆಂಗಳೂರಿನಲ್ಲಿ ಒಟ್ಟು 500 ಕೋಟಿ ರೂ.ಗಳ ವೆಚ್ಚದಲ್ಲಿ ಖಾಸಗಿ ಸಹಭಾಗಿತ್ವದೊಂದಿಗೆ ಜಾಗತಿಕ ಗುಣಮಟ್ಟದ ಫಿಲಂ ಸಿಟಿ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ.
ಸೋತರೂ ಸುಮ್ಮನಿರಲಿಲ್ಲ: ಮತ ಹಾಕದವರಿಂದ ಕೊಟ್ಟ ಕಾಸು ವಾಪಸ್ ಕಿತ್ತುಕೊಂಡ ಭೂಪ! ತೆಲಂಗಾಣದಲ್ಲಿ ದೇವರ ಫೋಟೋ ಹಿಡಿದು ಹೈಡ್ರಾಮಾ
ಹೈದರಾಬಾದ್: ಚುನಾವಣೆಯಲ್ಲಿ ಗೆಲ್ಲುವ ಸಲುವಾಗಿ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಮತದಾರರಿಗೆ ಕದ್ದುಮುಚ್ಚಿ ಹಣ, ಮದ್ಯ ಹಾಗೂ ಉಡುಗೊರೆ ಹಂಚುವುದು ಗುಟ್ಟಾಗೇನೂ ಉಳಿದಿಲ್ಲ. ಚುನಾವಣೆ ಮುಗಿದ ನಂತರ...







