ಕೊರೋನಾ ಭೀತಿ ಕ್ಷಣದಿಂದ ಕ್ಷಣಕ್ಕೆ ಹೆಚ್ಚಾಗುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಹೀಗಾಗಿ ರಾಜ್ಯದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ರಾಜ್ಯಕ್ಕೆ ಓದುಲು ಬಂದ ಹೊರ ರಾಜ್ಯದ ವಿಧ್ಯಾರ್ಥಿಗಳು ತಮ್ಮ ತವರಿಗೆ ತೆರಳಲು ಪರದಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳ ನೆರವಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಾಗಿದ್ದಾರೆ.
ಪಶ್ಚಿಮ ಬಂಗಾಳ ಮತ್ತು ಡಾರ್ಜಲಿಂಗ್ ಮೂಲದ 4 ವಿದ್ಯಾರ್ಥಿಗಳು ರಾಜ್ಯದಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಕಾಲೇಜುಗಳಿಗೆ ರಜೆ ನೀಡಲಾಗಿದೆ ಹಾಗಾಗಿ ತಮ್ಮ ಊರಿಗೆ ಹೋಗಲು ವಿದ್ಯಾರ್ಥಿಗಳು ಪರದಾಡುತ್ತಿದ್ದರು. ಈ ಸುದ್ದಿ ತಿಳಿದ ಸಿ.ಎಂ ಯಡಿಯೂರಪ್ಪ ವಿಮಾನ ಟಿಕೆಟ್ ಮಾಡಿಸಿ, ವಿದ್ಯಾರ್ಥಿಗಳನ್ನು ಅವರ ರಾಜ್ಯಕ್ಕೆ ಕಳುಹಿಸಿಕೊಟ್ಟಿದ್ದಾರೆ.
ಕೊರೊನಾ ಹರಡದಂತೆ ತಡೆಯಲು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಇದರಿಂದಾಗಿ ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ತಮ್ಮ ತವರಿಗೆ ತೆರಳಿದ್ದಾರೆ. ಇದರ ಪರಿಣಾಮದಿಂದ ಬೆಂಗಳೂರಿನಲ್ಲಿರುವ ಸರಿ ಸುಮಾರು 4 ಸಾವಿರ ಪಿಜಿಗಳು ಖಾಲಿಯಾಗಿವೆ ಎಂದು ವರದಿಯಾಗಿದೆ.









