ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆ ಸಂಬಂಧಿಸಿದಂತೆ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.
ಸಭೆಯಲ್ಲಿ ಸಂಸದ ಬಿ.ವೈ ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಕುಮಾರ ಬಂಗಾರಪ್ಪ, ಅರಗ ಜ್ಞಾನೇಂದ್ರ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು.
ಈಗಾಗಲೇ ಸಂತ್ರಸ್ಥರ ಪುನರ್ವಸತಿ ತಡವಾಗಿದ್ದು, ನಿಗದಿತ ದಿನಾಂಕದ ಒಳಗೆ ಕೆಲಸ ಮಾಡಬೇಕು ಎಂದು ಸಿಎಂ ಯಡಿಯೂರಪ್ಪ ಹಾಗು ಸಂಸದ ಬಿ.ವೈ ರಾಘವೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಮೀಕ್ಷೆಯ ಆಧಾರದಲ್ಲಿ ಸಂತ್ರಸ್ತರಿಗೆ ವೈಯಕ್ತಿಕ ಪಹಣಿ ದಾಖಲಿಸಲು ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಲು ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಈಗಾಗಲೇ ಪುನರ್ವಸತಿ ತಡವಾಗಿದ್ದು ನಿಗದಿತ ದಿನಾಂಕದ ಒಳಗೆ ಕೆಲಸ ಮಾಡಬೇಕು ಅಂತ ಸಿಎಂ ಯಡಿಯೂರಪ್ಪ ಹಾಗು ಸಂಸದ ಬಿ.ವೈ ರಾಘವೇಂದ್ರ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಪಿಪಿಪಿ ಮಾದರಿಯಲ್ಲಿ ನಿರ್ಮಿಸಲಾಗುತ್ತಿರುವ ರಸ್ತೆ ಕಾಮಗಾರಿಗೆ ಅರಣ್ಯ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ (ಎನ್ಓಸಿ) ನೀಡುವಂತೆ ಕೋರಲಾಗಿದೆ. ಈ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮೈಸೂರು ಕಾಗದ ಕಾರ್ಖಾನೆಯ ಅರಣ್ಯ ಪ್ರದೇಶದಲ್ಲಿ ಬೆಳೆದಿರುವ ಮರಗಳನ್ನು ಕಟಾವು ಮಾಡಿ, ಮಾರಾಟ ಮಾಡುವ ಮೂಲಕ ಸಿಬ್ಬಂದಿ ವೇತನ ಪಾವತಿಸಲು ಕ್ರಮ ಕೈಗೊಳ್ಳುವಂತೆ ಬಿಎಸ್ವೈ ಸೂಚಿಸಿದರು.
ಇಲಾಖೆಗಳ ನಡುವೆ ಹೊಂದಾಣಿಕೆಯ ಕೊರತೆ
ಮುಳಗಡೆ ಸಂತ್ರಸ್ತರಿಗೆ ಪುನರ್ವಸತಿ ಅನ್ನೋದು ಅರಣ್ಯ ಇಲಾಖೆ ಮತ್ತು ಇತರೆ ಇಲಾಖೆಗಳ ಹೊಂದಾಣಿಕೆಯ ಕೊರತೆಯಿಂದ ಮರೀಚಿಕೆಯಾಗಿದೆ. ಆದಷ್ಟು ಬೇಗ ಇದಕ್ಕೆ ಶಾಶ್ವತ ವ್ಯವಸ್ಥೆ ಕಲ್ಪಿಸಬೇಕು. ಲಿಂಗನಮಕ್ಕಿ ಜಲಾಶಯ ಕಟ್ಟುವಾಗ ರೈತರ ಜಮೀನು ಮುಳುಗಡೆ ಆಯ್ತು. ಆದರೆ ರೈತರಿಗೆ ಇನ್ನು ಪುನರ್ವಸತಿ ಕಲ್ಪಿಸಿ ಅವರಿಗೆ ಪರಿಹಾರ ಒದಗಿಸಿಲ್ಲ. ಅರಣ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಅಲ್ಲಿ ಹೋಗಿ ಸಮಸ್ಯೆ ಬಗೆಹರಿಸಬೇಕು. ರೈತರಿಗೆ ಪರಿಹಾರ ಒದಗಿಸಬೇಕು. ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಮೂರು ತಲೆಮಾರುಗಳ ದಾಖಲಾತಿ ಕೇಳುತ್ತಾರೆ. ಆದರೆ ಆ ದಾಖಲಾತಿ ಕೊಟ್ಟರೂ ಸಕ್ರಮ ಮಾಡುತ್ತಿಲ್ಲ. ಎಸ್.ಟಿ ಸಮುದಾಯಕ್ಕೆ ಐದು ವರ್ಷದ ದಾಖಲಾತಿ ನೀಡಬೇಕು. ಅದು ಕೊಟ್ಟರು ಸಕ್ರಮ ಮಾಡುತ್ತಿಲ್ಲ. ಇದಕ್ಕೆ ಶಾಶ್ವತ ಪರಿಹಾರ ಬೇಕು ಅಂತ ಎಂದು
ಸಂಸದ ಬಿ.ವೈ ರಾಘವೇಂದ್ರ ಮನವಿ ಮಾಡಿದರು.
ಜಂಟಿ ಸಮೀಕ್ಷೆ ನಡೆಸಲು ಶಾಸಕರ ಆಗ್ರಹ
ಜಿಲ್ಲೆಯ ಶಿವಮೊಗ್ಗ, ಶಿಕಾರಿಪುರ, ಸೊರಬ, ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲ್ಲೂಕುಗಳಲ್ಲಿ ಮುಳುಗಡೆ ಸಂತ್ರಸ್ತರೆಂದು ಗುರುತಿಸಲ್ಪಟ್ಟು ಸುಮಾರು 9773 ಎಕರೆ ವಿಸ್ತೀರ್ಣ ಪ್ರದೇಶದಲ್ಲಿ ಸಾಗುವಳಿ ಮಾಡಿಕೊಂಡು ಬಂದಿರುವ ರೈತರಿಗೆ ಭೂಮಿಯ ಹಕ್ಕನ್ನು ದಾಖಲೆ ಮಾಡುವ ನಿಟ್ಟಿನಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆಯವರು ಜಂಟಿ ಸಮೀಕ್ಷೆ ನಡೆಸುವಂತೆ ಸಿಎಂ ಯಡಿಯೂರಪ್ಪ ಅವರು ಸೂಚನೆ ನೀಡಬೇಕು. ಕೂಡಲೇ ಜಂಟಿ ಸರ್ವೆ ನಡೆಸಬೇಕು ಎಂದು
ಶಾಸಕರಾದ ಹರತಾಳು ಹಾಲಪ್ಪ ಹಾಗು ಕುಮಾರ ಬಂಗರಾಪ್ಪ ಒತ್ತಾಯಿಸಿದರು.
ಸಭೆಯಲ್ಲಿ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ್ ಧವೆ, ಸಿಎಂ ಆಪ್ತ ಕಾರ್ಯದರ್ಶಿ ರಮಣರೆಡ್ಡಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಹೇಶ್ವರ್ ರಾವ್, ಶಿವಮೊಗ್ಗ ಜಿಲ್ಲಾಧಿಕಾರಿ ಶಿವಕುಮಾರ್ ಸೇರಿದಂಯೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








