ಬೆಂಗಳೂರು : ಜಿಎಸ್ ಟಿ ಪರಿಹಾರವನ್ನು ತುಂಬಿಕೊಳ್ಳಲು ಆರ್ ಬಿಐ ನಿಂದ ಸಾಲ ಪಡೆಯಲು ಮುಂದಾಗಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ವಿಶ್ವಾಸದ್ರೋಹಕ್ಕೆ ತಲೆಬಾಗಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಜಿಎಸ್ ಟಿ ಪರಿಹಾರವನ್ನು ತುಂಬಿಕೊಳ್ಳಲು ಆರ್ ಬಿ ಐನಿಂದ ಸಾಲ ಪಡೆಯಲು ತೀರ್ಮಾನಿಸುವ ಮೂಲಕ ರಾಜ್ಯದ ಜನತೆಯನ್ನು ಸಾಲದ ಶೂಲಕ್ಕೆ ಒಡ್ಡಿದ್ದಾರೆ.
ಸಾಲ ಮಾಡಿಯಾದರೂ ಕೊರೊನಾ ನಿಯಂತ್ರಿಸುತ್ತೇನೆ, ಪ್ರವಾಹ ಪೀಡಿತರಿಗೆ ಪರಿಹಾರ ನೀಡುತ್ತೇನೆ, ಸರ್ಕಾರಿ ನೌಕರರ ಸಂಬಳ ಕೊಡುತ್ತೇನೆ… ಎಂದು ಬಿಎಸ್ ಯಡಿಯೂರಪ್ಪ ಅವರು ಪ್ರತಿಯೊಂದಕ್ಕೂ ಸಾಲದ ಮಂತ್ರ ಪಠಿಸುತ್ತಾ ಬಂದಿದ್ದಾರೆ. ಇವರೇನು ರಾಜ್ಯ ಸರ್ಕಾರವನ್ನು ದಿವಾಳಿ ಮಾಡಲು ತೀರ್ಮಾನಿಸಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.
2020-21ರ ಅಂತ್ಯಕ್ಕೆ ರೂ.3,68,692 ಕೋಟಿ ಸಾಲದ ಅಂದಾಜನ್ನು ಮುಖ್ಯಮಂತ್ರಿಗಳು ಬಜೆಟ್‍ನಲ್ಲಿ ಮಾಡಿದ್ದರು. ಈಗ ಕೊರೊನಾದಿಂದ ತೆರಿಗೆ ಸಂಗ್ರಹ ಕುಸಿದಿದೆ, ವಿತ್ತೀಯ ಕೊರತೆ ಹೆಚ್ಚಲಿದೆ, ಇವೆಲ್ಲದ್ದಕ್ಕೂ ಸಾಲ ಮಾಡಲು ಹೊರಟರೆ ಕರ್ನಾಟಕ ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಸಾಲದ ಮಿತಿ ಶೇ.25 ಅನ್ನು ಮೀರಲಾರದೇ?
ಹೊಸ ಸಾಲದ ಹೊರೆ ರೂ.11,324 ಕೋಟಿಗಷ್ಟೇ ಸೀಮಿತವೇ? ಇದು ಒಟ್ಟು ಜಿಎಸ್ ಟಿ ಪರಿಹಾರ 97,000 ಕೋಟಿಯಲ್ಲಿ ರಾಜ್ಯದ ಪಾಲು ಅಷ್ಟೆ.ಇದರ ಜೊತೆ ಕೊರೊನಾದಿಂದಾಗಿ ಜಿಎಸ್ ಟಿ ಒಟ್ಟು ನಷ್ಟ ರೂ.2,35,000 ಕೋಟಿ ಎಂದು ಅಂದಾಜು ಮಾಡಲಾಗಿದೆ. ಇದನ್ನು ಕೇಂದ್ರ ತುಂಬಿಕೊಡಲಿದೆಯೇ? ರಾಜ್ಯವೇ ಸಾಲಮಾಡಬೇಕೇ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ವೈಫಲ್ಯವನ್ನು ಮುಚ್ಚಿಹಾಕಲು ಬಿಎಸ್ ವೈ ಅವರು ರಾಜ್ಯದ ಹಿತವನ್ನು ಬಲಿಗೊಡುತ್ತಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಜನತೆಗೆ ಬಗೆದಿರುವ ದ್ರೋಹವನ್ನು ಕಾಂಗ್ರೆಸ್ ಪಕ್ಷ ವಿಧಾನಮಂಡಲದ ಅಧಿವೇಶನದಲ್ಲಿ ಬಿಚ್ಚಿಡಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.








