ಎಸ್ ಎಸ್ ಎಲ್ ಸಿ ಪರೀಕ್ಷೆ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಬಿಎಸ್ ವೈ
ಬೆಳಗಾವಿ : ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಸೂಕ್ತ ದಿನಾಂಕ ನಿಗದಿಪಡಿಸಿ ಎರಡು ದಿನ ಸರಳೀಣಕರಣವಾಗಿ ಪರೀಕ್ಷೆ ನಡೆಸೋದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಇದರ ಬೆನ್ನೆಲ್ಲೆ ಸಿಎಂ ಬಿಎಸ್ ಯಡಿಯೂರಪ್ಪ ಎಸ್ ಎಸ್ ಎಲ್ ಸಿ ಪರೀಕ್ಷೆ ಬಗ್ಗೆ ಮಹತ್ವದ ಹೇಳಿಕೆಯೊಂದನ್ನು ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಸ್ಥಿತಿ ಸುಧಾರಣೆಯಾದರೆ ಮಾತ್ರ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುತ್ತೇವೆ.
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಯಾವುದೇ ಗೊಂದಲವಿಲ್ಲ. ಇನ್ನು ಒಂದೂವರೆ ಎರಡು ತಿಂಗಳ ನಂತರ ವಾತಾವರಣದಲ್ಲಿ ಸುಧಾರಣೆ ಕಂಡು ಬಂದರೆ ಒಂದು ದಿನ ಅಥವಾ ಎರಡು ದಿನದಲ್ಲಿ ಪರೀಕ್ಷೆ ನಡೆಸಬೇಕೆಂದು ತೀರ್ಮಾನಿಸಿದ್ದಾರೆ.
ಹಾಗಾಗಿ ಈ ಕುರಿತಂತೆ ಪರಿಸ್ಥಿತಿ ನೋಡಿಕೊಂಡು ತೀರ್ಮಾನಿಸುತ್ತೇವೆ. ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ. ನಾನು ಬೆಂಗಳೂರಿಗೆ ಹೋಗಿ ಸುರೇಶ್ ಕುಮಾರ್ ಜೊತೆ ಮಾತನಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಇಂದು ಬೆಳಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ರವರು, ಕೋವಿಡ್ ಸಾಂಕ್ರಾಮಿಕ ನ್ನೆಲೆ ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಿದ್ದು ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವುದಾಗಿ ತಿಳಿಸಿದರು.









