ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾ, ಅಧಿಕೃತ ನಿವಾಸ ಕಾವೇರಿ ಮತ್ತು ಧವಳಗಿರಿ ನಿವಾಸದಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಈ ಹಿನ್ನೆಲೆ ಬಿಎಸ್ ವೈ ಸ್ವಯಂ ಕ್ವಾರಂಟೈನ್ ಆಗಿದ್ದು, ತಮ್ಮ ಬಿಡುವಿನ ಈ ಸಮಯದಲ್ಲಿ ಪುಸ್ತಕಗಳನ್ನು ಓದುವ ಮೂಲಕ ಕಾಲಕಳೆಯುತ್ತಿದ್ದಾರೆ.
‘ಬಿಡುವಿನ ವೇಳೆಯಲ್ಲಿ ನನಗೆ ಅತ್ಯಂತ ಪ್ರಿಯವಾದ ಕಾಲಕ್ಷೇಪವೆಂದರೆ ಓದುವುದು. ನೂರಾರು ಸಂಗತಿಗಳ ಬಗ್ಗೆ ತಿಳಿದಷ್ಟೂ ತಿಳಿಯಬಹುದಾದ ವಿಷಯಗಳಿವೆ, ಜ್ಞಾನಾರ್ಜನೆ ಎಂದೂ ಮುಗಿಯದ ಕಾಯಕ. ಇಂದಿನ ಭಾನುವಾರದ ಲಾಕ್ ಡೌನ್ ಮತ್ತು ಸ್ವಯಂ ಕ್ವಾರಂಟೈನ್ ನಲ್ಲಿರುವ ವೇಳೆ ಸಿಕ್ಕ ಸ್ವಲ್ಪ ಬಿಡುವಿನ ಸಮಯವನ್ನು ಖಾಂಡೇಕರ್ ಅವರ ಯಯಾತಿಯ ಜೊತೆಗೆ ಕಳೆಯುತ್ತಿದ್ದೇನೆ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.









