ಬೆಂಗಳೂರು: ಮೈಸೂರಿನ ಶಿವರಾತ್ರೀಶ್ವರ ಮಹಾವಿದ್ಯಾಪೀಠ ಹೊರತಂದಿರುವ ಶಿವಪದ ರತ್ನಕೋಶ ಗ್ರಂಥವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಆನ್‍ಲೈನ್ ಮೂಲಕ ಬಿಡುಗಡೆ ಮಾಡಿದರು.
ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಗೌರವ ಸಂಪಾದಕತ್ವ ಹಾಗೂ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಮಾರ್ಗದರ್ಶನದಲ್ಲಿ ಮೂಡಿ ಬಂದಿರುವ ಈ ಗ್ರಂಥವು ಶಿವಧರ್ಮ, ಸಂಸ್ಕøತಿ, ಸಿದ್ಧಾಂತಗಳನ್ನು ಯಥಾವತ್ತಾಗಿ ಪರಿಚಯಿಸುವ ಸಾವಿರ ಪುಟಗಳ ಬೃಹತ್ ಪದ ಭಂಡಾರವಾಗಿದೆ.
ಜಗದ್ಗುರು ಶಿವರಾತ್ರೀಶ್ವರ ಗ್ರಂಥಮಾಲೆಯೂ ಸೇರಿದಂತೆ ಸುಮಾರು 300ಕ್ಕೂ ಹೆಚ್ಚು ಮೌಲಿಕ ಗ್ರಂಥಗಳನ್ನು ಪ್ರಕಟಿಸಿರುವ ಕೀರ್ತಿ ಸಂಸ್ಥೆಗೆ ಸಲ್ಲುತ್ತದೆ. ಗ್ರಂಥ ಲೋಕಾರ್ಪಣೆ ಮಾಡಿ ಮಾತನಾಡಿದ ಸಿಎಂ ಯಡಿಯೂರಪ್ಪ, ಶಿವಪದ ರತ್ನಕೋಶವು ಶೈವಾಗಮಗಳು, ವಚನ ಸಾಹಿತ್ಯ, ವೀರಶೈವ ಕಾವ್ಯ, ಅಪರೂಪದ ರೂಢಿಯ ಪದಗಳನ್ನು ಒಳಗೊಂಡು ರೂಪುಗೊಂಡಿದೆ. ಕರ್ನಾಟಕದ ಜನರ ಬದುಕಿನಲ್ಲಿ ಮಠ-ಮಾನ್ಯಗಳ ಪಾತ್ರ, ಪ್ರಭಾವ ಅಗಾಧವಾದುದು. ವಿದ್ವತ್ಪೂರ್ಣವೂ, ಪರಿಶ್ರಮದಾಯಕವೂ ಆದ ಈ ಮಹತ್ಕಾರ್ಯವನ್ನು ನೆರವೇರಿಸಿದ ಸುತ್ತೂರು ಶ್ರೀಮಠಕ್ಕೆ ಹಾಗೂ ಸಂಪಾದಕ ಮಂಡಳಿಗೆ ಅಭಿನಂದಿಸುತ್ತೇನೆ. ಈ ಅಮೂಲ್ಯ ಸಂಪತ್ತಿನ ಸದುಪಯೋಗವನ್ನು ಕನ್ನಡಿಗರು ಪಡೆಯಲಿ ಎಂದರು.
ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ, ತುಮಕೂರಿನ ಸಿದ್ದಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಡಿಸಿಎಂ ಗೋವಿಂದ ಕಾರಜೋಳ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸಿ.ಟಿ. ರವಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಪ್ರತಾಪ್ ಸಿಂಹ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ್ ಉಪಸ್ಥಿತರಿದ್ದರು.
ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ
ಇಸ್ಲಾಮಾಬಾದ್: ನಮಗೆ ಯುದ್ಧ ಬೇಕಾಗಿಲ್ಲ, ನಾವು ಶಾಂತಿಯನ್ನು ಮಾತ್ರ ಬಯಸುತ್ತೇವೆ. ಆದರೆ, ಶಾಂತಿಗಾಗಿ ನಾವು ಕೈಜೋಡಿಸುತ್ತಿರುವುದನ್ನು ಯಾರೂ ನಮ್ಮ ಬಲಹೀನತೆ ಎಂದು ಭಾವಿಸಬಾರದು ಎಂದು ಪಾಕಿಸ್ತಾನದ ಪ್ರಧಾನಿ...








