ಚಾಮರಾಜನಗರ: ಇತಿಹಾಸ ಪ್ರತಿದ್ಧ ಧಾರ್ಮಿಕ ಕ್ಷೇತ್ರ ಮಲೆಮಹದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಾಧಿಕಾರದ ಸಭೆ ನಡೆಸಿದ ಬಿಎಸ್‍ವೈ, ಮಲೆ ಮಹದೇಶ್ವರ ಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಸಭೆಯಲ್ಲಿ ಸವಿಸ್ತಾರವಾಗಿ ಚರ್ಚಿಸಲಾಗಿದೆ. ಮಲೆ ಮಹದೇಶ್ವರ ಬೆಟ್ಟದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಾಧಿಕಾರದ ವತಿಯಿಂದ 15 ಶಾಲೆಗಳನ್ನು ದತ್ತು ತೆಗೆದುಕೊಂಡು ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಿ ಶಾಲೆಗಳ ಸವಾರ್ಂಗೀಣ ಪ್ರಗತಿಗೆ ಒತ್ತು ನೀಡಲಾಗುವುದು ಎಂದರು.
ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದೇನೆ. ಇದರಲ್ಲಿ ಈಗಾಗಲೇ ಪೂರ್ಣಗೊಂಡಿರುವ ಹಲವು ಕಾಮಗಾರಿಗಳು ಇವೆ. ಇನ್ನು ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದರು.
ಸಭೆ ನಂತರ ಮಲೆ ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ ವಿಶೇಷ ಪೂಜೆ ಸಲ್ಲಿಸಿದರು.
ಒಂದು ಸಾವಿರ ಜನರಿಗೆ ಮಾತ್ರ ಪಂಚಲಿಂಗ ದರ್ಶನ
ಒಂದು ಸಾವಿರ ಜನಕ್ಕೆ ಸೀಮಿತಗೊಳಿಸಿ, ಸರಳವಾಗಿ ಪಂಚಲಿಂಗ ದರ್ಶನ ಮಹೋತ್ಸವ ನಡೆಸಲು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ತಿ.ನರಸೀಪುರ ತಾಲ್ಲೂಕಿನ ತಲಕಾಡಿನ ಪಂಚಲಿಂಗ ದರ್ಶನ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಕ್ಕೆ ಬರಲಾಗಿದೆ.
ಪಂಚಲಿಂಗ ದರ್ಶನದ ಹಿನ್ನೆಲೆ ಅಗತ್ಯವಿರುವ ಕೆಲಸಗಳನ್ನು ಈಗ ತುರ್ತಾಗಿ ಕೈಗೊಳ್ಳಬೇಕು. ತಲಕಾಡು ಅಭಿವೃದ್ಧಿಗೆ ಬೇಕಾಗುವ ಶಾಶ್ವತ ಕೆಲಸಗಳನ್ನು ನಂತರ ಕೈಗೆತ್ತುಕೊಳ್ಳಿ. ಈಗ ತಯಾತುರಿಯಲ್ಲಿ ಮಾಡುವುದು ಬೇಡ ಎಂದು ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಡಿಸಿಎಂ ಗೋವಿಂದ ಎಂ.ಕಾರಜೋಳ, ರಸ್ತೆ ಗುಂಡಿ ಮುಚ್ಚುವ ಕೆಲಸ ಗುರುವಾರದಿಂದ ಆರಂಭವಾಗಲಿದೆ. ಈ ಕೆಲಸವನ್ನು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ತ್ವರಿತಗತಿಯಲ್ಲಿ ಪೂರ್ಣಗೊಳಿಸಲಿದ್ದಾರೆ ಎಂದು ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel