ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಹೊತ್ತಲ್ಲೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ದೆಹಲಿ ವರಿಷ್ಠರಿಗೆ ಬಿಗ್ ಶಾಕ್ ನೀಡಿದ್ದಾರೆ. ಹೈಕಮಾಂಡ್ ಸಮ್ಮಿತಿ ಇಲ್ಲದೆ, ಪಕ್ಷದ ಕೋರ್ ಕಮಿಟಿ ಜೊತೆ ಚರ್ಚಿಸದೇ ಸಿಎಂ ಅವರು ಹಲವು ತಿಂಗಳಿನಿಂದ ಖಾಲಿ ಉಳಿದಿದ್ದ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಿದ್ದಾರೆ.
ಯಾವ ಶಾಸಕರಿಗೆ ಯಾವ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ..?
ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಕರ್ನಾಟಕ ಗೃಹ ಮಂಡಳಿ, ಬೆಂಗಳೂರು
ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ
ಸುರಪುರ ಶಾಸಕ ರಾಜೂಗೌಡ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ, ಕರ್ನಾಟಕ ಮಾರುಕಟ್ಟೆ ಕನ್ಸಲ್ಟೆಂಟ್ಸ್ ಮತ್ತು ಏಜೆನ್ಸಿಸ್ ಲಿಮಿಟೆಡ್
ಮುದ್ದೆಬಿಹಾಳ ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ
ಸಾಗರ ಶಾಸಕ ಹರತಾಳು ಹಾಲಪ್ಪ, ಮೈಸೂರು ಸೇಲ್ಸ್ ಇಂಟರ್ ನ್ಯಾಶನಲ್ ಲಿಮಿಟೆಡ್
ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ
ಚಿತ್ರದುರ್ಗದ ಶಾಸಕ ತಿಪ್ಪಾರೆಡ್ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
ದೇವದುರ್ಗ ಶಾಸಕ ಶಿವನಗೌಡ ನಾಯಕ್, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ
ರೋಣ ಶಾಸಕ ಕಳಕಪ್ಪ ಬಂಡಿ, ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ
ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ
ತೇರದಾಳ ಶಾಸಕ ಸಿದ್ದು ಸವದಿ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ
ಹಾಸನ ಶಾಸಕ ಪ್ರೀತಂ ಗೌಡ, ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ
ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲಬುರಗಿ
ಗುಲ್ಬರ್ಗ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ
ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಕರ್ನಾಟಕ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ
ತಿಪಟೂರು ಶಾಸಕ ನಾಗೇಶ್ ಕರ್ನಾಟಕ ರಾಜ್ಯ ತೆಂಗಿನ ನಾರಿನ ಅಭಿವೃದ್ಧಿ ನಿಗಮ
ಜಗಳೂರು ಶಾಸಕ ಎಸ್.ವಿ. ರಾಮಚಂದ್ರ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ
ಹಾವೇರಿ ಶಾಸಕ ನೆಹರು ಓಲೇಕಾರ್ ಡಾ. ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ
ರಾಯಭಾಗ ಶಾಸಕ ದುರ್ಯೋಧನ ಐಹೊಳೆ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ
ಕಾಪು ಶಾಸಲ ಲಾಲಾಜಿ ಮೆಂಡನ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ
ಕನಕಗಿರಿ ಶಾಸಕ ಬಸವರಾಜ್ ದಡೇಸೂಗೂರ್, ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಮಂಡಳಿ
ರಾಯಚೂರು ಶಾಸಕ ಡಾ. ಎಸ್. ಶಿವರಾಜ್ ಪಾಟೀಲ್, ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ
ಗುಂಡ್ಲುಪೇಟೆ ಶಾಸಕ ನಿರಂಜನ್ ಕುಮಾರ್ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ







