ಇಂದು ಸಂಜೆ 5 ಗಂಟೆಗೆ ಬಿಎಸ್ ವೈ ಮಹತ್ವದ ಸುದ್ದಿಗೋಷ್ಠಿ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಹುಚ್ಚು ಕುದುರೆ ಓಟಕ್ಕೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ರಾಜ್ಯದಾದ್ಯಂತ ಲಾಕ್ ಡೌನ್ ಜಾರಿ ಮಾಡಿದೆ. ಸದ್ಯ ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಸಂಜೆ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಇಂದು ಸಂಜೆ 5 ಗಂಟೆಗೆ ಬಿಎಸ್ ವೈ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು, ತೀವ್ರ ಕುತೂಹಲ ಹುಟ್ಟಿಸಿದೆ. ಯಾಕಂದ್ರೆ ಲಾಕ್ ಡೌನ್ ಅವಧಿ ಪೂರ್ಣಗೊಳ್ಳುವ ಮೊದಲೇ ಸಿಎಂ ಸಚಿವರ ಜೊತೆ ಸಭೆ ನಡೆಸುತ್ತಿದ್ದಾರೆ. ಸದ್ಯದಲ್ಲಿ ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ಮುಗಿಯಲು ಇನ್ನೂ 10 ದಿನ ಬಾಕಿ ಇದೆ. ಈ ಮಧ್ಯೆ ಸಿಎಂ ಸಚಿವರ ಜೊತೆ ಮೀಟಿಂಗ್ ಮಾಡುತ್ತಿರೋದು, ಹಾಗೂ ಸಂಜೆ ಸುದ್ದಿಗೋಷ್ಠಿ ಕರೆದಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಲಾಕ್ ಡೌನ್ ಹಿನ್ನೆಲೆ ಸಿಎಂ ವಿಶೇಷ ಪ್ಯಾಕೇಜ್ ಘೋಷಣೆ ಮಾಡುತ್ತಾರಾ..? ಅಥವಾ ಲಾಕ್ ಡೌನ್ ಬಗ್ಗೆ ಏನಾದ್ರೂ ಮಹತ್ವದ ತೀರ್ಮಾನ ತೆಗೆದುಕೊಳ್ಳುತ್ತಾರಾ ಎಂದು ಕುತೂಹಲ ಎಲ್ಲರಲ್ಲೂ ಇದೆ.
ಕೇಂದ್ರ ಸರ್ಕಾರ ತಾರತಮ್ಯ ಬಿಟ್ಟು ಕರ್ನಾಟಕದ ಅಗತ್ಯವನ್ನು ಪೂರೈಸಬೇಕು. ತಾನು ಸರ್ವಶಕ್ತ ಆಡಳಿತ ನಡೆಸುತ್ತಿರುವ ದಿಮಾಕನ್ನು ಕೇಂದ್ರ ಬಿಡಬೇಕು. ಒಕ್ಕೂಟ ಸರ್ಕಾರ ನಡೆಸುತ್ತಿರುವ ವಾಸ್ತವ ಅರಿಯಬೇಕು. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷದ ತಪ್ಪನ್ನು ಇಲ್ಲಿ ಸಮರ್ಥಿಸಿಕೊಳ್ಳುತ್ತಿರುವವರು ಮೊದಲು ತಾವು ಕನ್ನಡಿಗರು ಎಂಬುದು ಅರಿಯಬೇಕು.
ಆಮ್ಲಜನಕ ಕರ್ನಾಟಕದ ಈ ಹೊತ್ತಿನ ಅಗತ್ಯ. ಈ ವಿಚಾರದಲ್ಲಿ ಆಗುತ್ತಿರುವ ತಾರತಮ್ಯವನ್ನೇ ಕನ್ನಡಿಗರಾಗಿ ನಾವು ಪ್ರಶ್ನೆ ಮಾಡದೇ ಹೋದರೆ ಇನ್ನ್ಯಾವ ವಿಚಾರದಲ್ಲಿ ನಾವು ನ್ಯಾಯ ಪಡೆಯಲು ಸಾಧ್ಯ. ಪರಿಹಾರ, ಅನುದಾನಗಳಲ್ಲಿ ಕರ್ನಾಟಕಕ್ಕೆ ಈಗ ಆಗಿರುವ ಅನ್ಯಾಯ ಸಹಿಸಿದ್ದಾಗಿದೆ. ಜೀವದ ವಿಚಾರದಲ್ಲಿ ನಡೆಯುತ್ತಿರುವ ಈ ತಾರತಮ್ಯ ಸಹಿಸುವುದು ಬೇಡ ಎಂದು ಕರೆಕೊಟ್ಟಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಗೆ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.