ಹುಬ್ಬಳ್ಳಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತೆ, ಆದ್ರೆ ಅದು ಯಾವಾಗ ಅಗುತ್ತೆ ಗೊತ್ತಿಲ್ಲ. ಬಿ.ಎಸ್ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯೋದು ಪಕ್ಕಾ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೆ ಬಾಂಬ್ ಸಿಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಯಡಿಯೂರಪ್ಪ ಅವರೇ ಪೂರ್ಣಾವಧಿ ಸಿಎಂ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಅವರನ್ನು ಮತ್ತೆ ಅವರು ತೆಗೆದುಹಾಕ್ತಿವಿ ಅಂತ ಹೇಳೋಕೆ ಆಗುತ್ತಾ..? ಎಂದು ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ಉಳಿದ ಅವಧಿಯನ್ನು ಪೂರ್ಣಗೊಳಿಸುತ್ತದೆ. ಆದ್ರೆ ಸಿಎಂ ಸ್ಥಾನ ಬದಲಾವಣೆಯಾಗುತ್ತದೆ. ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಆಗುವುದಿಲ್ಲ ಎಂದರು.
ಕೊರೊನಾ ವ್ಯಾಕ್ಸಿನ್ ಎಲ್ಲರೂ ತೊಗೋಬೇಕು, ಆದ್ರೆ ಅದು ಸೈಂಟಿಪಿಂಕ್ ಆಗಿ ಪ್ರೂವ್ ಆಗಬೇಕು. ಅದು 80 ಪಸೆರ್ಂಟ್ ಗಿಂತ ಜಾಸ್ತಿ ಎಫೆಕ್ಟ್ ಇರಬೇಕು. ಆ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಎಕ್ಸ್ಪರ್ಟ್ ಅಲ್ಲ, ಆ ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ ಎಂದ ಸಿದ್ದರಾಮಯ್ಯ, ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ನಾವೇ ಹೆಚ್ಚು ಸ್ಥಾನ ಗೆದ್ದಿದ್ದೇವೆ. ಹಳೇ ಮೈಸೂರು, ರಾಜ್ಯದಲ್ಲಿ ನಾವೇ ನಂಬರ್ ಒನ್. ಆದರೆ, ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಬಿಜೆಪಿಯವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎಂದು ಆರೋಪಿಸಿದರು.
ಎನ್ಡಿಎ ಜೊತೆ ಜೆಡಿಎಸ್ ಮೈತ್ರಿ ಬಗ್ಗೆ ನಾನು ಮಾತನಾಡುವುದಿಲ್ಲ ಎಂದ ಸಿದ್ದರಾಮಯ್ಯ ಕುರುಬ ಸಮುದಾಯದವರು ಮೀಮೀಸಲಾತಿ ಕೇಳೋದು ತಪ್ಪಲ್ಲ. ನಾನು ಸಿಎಂ ಆಗಿದ್ದಾಗ ನಾಲ್ಕು ಸಮುದಾಯವನ್ನ ಸಿಫಾರಸ್ಸು ಮಾಡಿದ್ದೆ. ಈಶ್ವರಪ್ಪ ಸಚಿವರಾಗಿದ್ದು, ಕೇಂದ್ರ ಸರ್ಕಾರವನ್ನ ಕೇಳಲಿ. ಈಶ್ವರಪ್ಪ ಕುರುಬ ಸಮುದಾಯವನ್ನ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಇದು ಆರ್ಎಸ್ಎಸ್ ಹಾಗೂ ಈಶ್ವರಪ್ಪ ಕುತಂತ್ರ. ರಾಜ್ಯದಲ್ಲಿ ಬಿಜೆಪಿಯ ಸರ್ಕಾರವಿದೆ, ಈಶ್ವರಪ್ಪ ಹೋರಾಟ ಮಾಡೋದು ಬಿಟ್ಟು ಮೀಸಲಾತಿ ಕೊಡಿಸಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel