ಬೆಂಗಳೂರು: ಕೊರೊನಾ ತಡೆಗೆ ದೇಶಾದ್ಯಂತ ಮಾಡಲಾಗಿದ್ದ ಲಾಕ್‍ಡೌನ್ ಹಾಗೂ ಅನ್‍ಲಾಕ್ ಅಗಿ ಬಹಳ ದಿನಗಳ ನಂತರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಾಜಭವನಕ್ಕೆ ಭೇಟಿ ನೀಡಿದ್ದರು.
ಬೆಳಿಗ್ಗೆ 11.30ಕ್ಕೆ ರಾಜ್ಯಪಾಲ ವಜುಭಾಯ್ ವಾಲಾ ಅವರನ್ನು ಭೇಟಿ ಮಾಡಿದ ಸಿಎಂ ಯಡಿಯೂರಪ್ಪ ರಾಜ್ಯದ ಸದ್ಯದ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು.
ಕೊರೊನಾ ನಿಯಂತ್ರಣಕ್ಕೆ ಮಾಡಲಾಗಿದ್ದ ಲಾಕ್‍ಡೌನ್ ತೆರವು ಮಾಡಲಾಗಿದೆ. ಇನ್ನು ಮುಂದೆ ರಾಜ್ಯದಲ್ಲಿ ಲಾಕ್‍ಡೌನ್ ಮಾಡುವುದಿಲ್ಲ ಎಂದು ಬಿಎಸ್‍ವೈ ನಿನ್ನೆ ಘೋಷಣೆ ಮಾಡಿದ ಬೆನ್ನಲ್ಲೇ ಇಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವುದನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳು, ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ನೀಡುತ್ತಿರುವ ಚಿಕಿತ್ಸೆ ಹಾಗೂ ಲಾಕ್‍ಡೌನ್ ತೆರವಾದ ನಂತರ ಸರ್ಕಾರ ಪ್ರಕಟಿಸಿದ ಪರಿಹಾರ ಪ್ಯಾಕೇಜ್‍ಗಳ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ
Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!
ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ವ್ರತವು ಅತ್ಯಂತ ವೈಭವದಿಂದ ತುಂಬಿರುವ ಮತ್ತು ಭಕ್ತರ ಆಸೆಗಳನ್ನು ಪೂರೈಸುವ ದೈವಿಕ ಸೃಷ್ಟಿ. ಈ ಉಪವಾಸವು ಪರಮಶಿವುನಿಯ ಪುತ್ರ, ಜ್ಞಾನದಾತ ಸುಬ್ರಹ್ಮಣ್ಯ ಸ್ವಾಮಿಯ...








