ಬೆಂಗಳೂರು : ಕೊರೊನಾ ಕಾಟದ ಮಧ್ಯೆ ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಲಿದ್ದು, ಈಗಾಗಲೇ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಶುಭ ಹಾರೈಸಿದ್ದಾರೆ.
ಟ್ವೀಟ್ ಮಾಡಿ ಶುಭ ಹಾರೈಸಿರುವ ಬಿಎಸ್ ವೈ, “ನಾಳೆಯಿಂದ ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೂ ಶುಭ ಹಾರೈಕೆಗಳು. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ ಡೌನ್ ಕಾರಣದಿಂದ ಮುಂದೂಡಲಾಗಿದ್ದ ಪರೀಕ್ಷೆ ಸುಸೂತ್ರವಾಗಿ ನಡೆಯಲು ಸರ್ಕಾರ ಎಲ್ಲ ಅಗತ್ಯ ಸಿದ್ಧತೆಗಳನ್ನ ಮಾಡಿದೆ”.
“ವಿದ್ಯಾರ್ಥಿಗಳೇ, ಮಾಸ್ಕ್, ಸ್ಯಾನಿಟೈಸರ್ ಗಳನ್ನು ಕಡ್ಡಾಯವಾಗಿ ಬಳಸಿ, ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಿ. ಸರ್ಕಾರ ಪರೀಕ್ಷೆ ನಡೆಸಲು ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಿ. ಶೈಕ್ಷಣಿಕ ಜೀವನದ ಮಹತ್ವದ ಘಟ್ಟವಾದ ಪರೀಕ್ಷೆಯನ್ನು ಆತಂಕ & ಭಯವಿಲ್ಲದೆ ಆತ್ಮವಿಶ್ವಾಸದಿಂದ ಎದುರಿಸಿ, ಯಶಸ್ಸು ಪಡೆಯಿರಿ. ಉಜ್ವಲ ಭವಿಷ್ಯ ನಿಮ್ಮದಾಗಲಿ” ಎಂದು ಟ್ವೀಟ್ ನಲ್ಲಿ ಸಿಎಂ ಬರೆದುಕೊಂಡಿದ್ದಾರೆ.