Budget 2022 – ಬಡವರಿಗೆ ಒಂದು ವರ್ಷದಲ್ಲಿ 80 ಲಕ್ಷ ಮನೆ ನಿರ್ಮಾಣ -48000 ಕೋಟಿ ಮೀಸಲು.
2022-23ನೇ ಸಾಲಿನ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು, ಒಂದು ವರ್ಷದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ದೇಶಾದ್ಯಂತ 80 ಲಕ್ಷ ಮನೆಗಳನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.
2022-23ನೇ ಹಣಕಾಸು ವರ್ಷದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ 48 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಡಲಾಗುವುದು ಎಂದು ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವರು ಹೇಳಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಈ ಯೋಜನೆಯನ್ನು ಜನರ ಬಳಿಗೆ ಕೊಂಡೊಯ್ಯಲು ಶ್ರಮಿಸಲಿವೆ.
ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಹಂಚಿಕೆ ಮೊತ್ತವನ್ನು ಹೆಚ್ಚಿಸಲಾಗಿದೆ ಎಂದು ಹಣಕಾಸು ಸಚಿವರು ಹೇಳಿದರು. ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಕೇಂದ್ರ ಸರ್ಕಾರ 48000 ಕೋಟಿ ರೂ. ಬಿಡುಗಡೆ ಮಾಡಲಿದೆ. 2022-23ರಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 80 ಲಕ್ಷ ಮನೆಗಳನ್ನು ನಿರ್ಮಿಸಲಾಗುವುದು.
ಪ್ರಧಾನ ಮಂತ್ರಿ ಆವಾಸ್ ಯೋಜನೆಯು ಸರ್ಕಾರಿ ಯೋಜನೆಯಾಗಿದ್ದು, ಇದರ ಅಡಿಯಲ್ಲಿ ದುರ್ಬಲ ಆದಾಯದ ಗುಂಪಿನ ಎಲ್ಲಾ ಜನರು ಅಥವಾ ಕುಟುಂಬಗಳಿಗೆ ಪಕ್ಕಾ ಮನೆಗಳನ್ನು ಒದಗಿಸಬೇಕು ಎನ್ನುವುದು ಸರ್ಕಾರದ ಯೋಜನೆ. ಇದಕ್ಕಾಗಿ ವಿವಿಧ ಅರ್ಹತಾ ಷರತ್ತುಗಳಿವೆ, ಅದರ ಅಡಿಯಲ್ಲಿ ಪ್ರಯೋಜನವನ್ನು ನೀಡಲಾಗುತ್ತದೆ. ನಗರ ಮತ್ತು ಗ್ರಾಮಾಂತರಕ್ಕೆ ಈ ಯೋಜನೆ ಜಾರಿಗೊಳಿಸಲಾಗಿದೆ. ಕಳೆದ ವರ್ಷ, ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮಿಣ ಪ್ರಯೋಜನವು ಮಾರ್ಚ್ 2024 ರವರೆಗೆ ಲಭ್ಯವಿರುತ್ತದೆ ಎಂದು ಸರ್ಕಾರ ಘೋಷಿಸಿದೆ.








