Budget 2022 – ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು…
ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಭಾಷಣದಿಂದ ಆರಂಭವಾಗಿದೆ. ರಾಷ್ಟ್ರಪತಿಗಳು ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಅಧ್ಯಕ್ಷರು ಸ್ವಾತಂತ್ರ್ಯ ಯೋಧರಿಗೆ ವಂದನೆ ಸಲ್ಲಿಸುವ ಮೂಲಕ ಭಾಷಣ ಆರಂಭಿಸಿದರು. ಬಳಿಕ ಲಸಿಕೆ ಹಾಗೂ ಕೊರೊನಾ ಯುಗದಲ್ಲಿ ಸರ್ಕಾರದ ಆರೋಗ್ಯ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ರಾಷ್ಟ್ರಪತಿಗಳು “ಭಾರತಕ್ಕೆ ಹಕ್ಕುಗಳನ್ನು ನೀಡಿದ ದೇಶದ ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರಿಗೆ ನಾನು ನಮಿಸುತ್ತೇನೆ. ಈ 75 ವರ್ಷಗಳ ಸ್ವಾತಂತ್ರ್ಯದಲ್ಲಿ ದೇಶದ ಅಭಿವೃದ್ಧಿ ಪಯಣದಲ್ಲಿ ಕೊಡುಗೆ ನೀಡಿದ ಎಲ್ಲ ಮಹಾನ್ ವ್ಯಕ್ತಿಗಳನ್ನು ನಾನು ಗೌರವದಿಂದ ಸ್ಮರಿಸುತ್ತೇನೆ. ಎಂದು ಭಾಷಣದಲ್ಲಿ ಮುಂದುವರೆಸಿದರು.
ಸರ್ಕಾರ ಮತ್ತು ನಾಗರಿಕರ ನಡುವಿನ ಈ ಪರಸ್ಪರ ನಂಬಿಕೆ, ಸಮನ್ವಯ ಮತ್ತು ಸಹಕಾರವು ಪ್ರಜಾಪ್ರಭುತ್ವದ ಶಕ್ತಿಗೆ ಅಭೂತಪೂರ್ವ ಉದಾಹರಣೆಯಾಗಿದೆ ಎಂದು ಅವರು ಹೇಳಿದರು. ಇದಕ್ಕಾಗಿ ನಾನು ದೇಶದ ಪ್ರತಿಯೊಬ್ಬ ಆರೋಗ್ಯ ಮತ್ತು ಮುಂಚೂಣಿಯ ಕಾರ್ಯಕರ್ತರನ್ನು, ಪ್ರತಿಯೊಬ್ಬ ದೇಶವಾಸಿಗಳನ್ನು ಅಭಿನಂದಿಸುತ್ತೇನೆ. ಎಂದು ತಿಳಿಸಿದರು.
ರಾಷ್ಟಪತಿಗಳ ಭಾಷಣದ ನಂತರ ಬಜೆಟ್ ಅಧಿವೇಶನ ಶುರುವಾಗಲಿದೆ…








