Budget 2022 – RBI ನಿಂದ ಶೀಘ್ರದಲ್ಲೇ ಬರಲಿದೆ ಡಿಜಿಟಲ್ ರುಪಾಯಿ – ಬಿಟ್ ಕಾಯಿನ್ ಭವಿಷ್ಯ ಅಸ್ಪಷ್ಟ..
ಭಾರತೀಯ ರಿಸರ್ವ್ ಬ್ಯಾಂಕ್ ಶೀಘ್ರದಲ್ಲೇ ಡಿಜಿಟಲ್ ರೂಪಾಯಿಯನ್ನು ಬಿಡುಗಡೆ ಮಾಡಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಬೆಳಿಗ್ಗೆ ದೃಢಪಡಿಸಿದರು. ಆರ್‌ಬಿಐನಿಂದ ಡಿಜಿಟಲ್ ಕರೆನ್ಸಿಯು, ಕ್ರಿರ್ಪ್ಟೋ ಕರೆನ್ಸಿಗಳ ರೀತಿ ಬ್ಲಾಕ್‌ಚೈನ್ ತಂತ್ರಜ್ಞಾನವನ್ನು ಆಧರಿಸಿದೆ ಬಿಡುಗಡೆ ಮಾಡಲಾಗುವುದು.
ಬಿಟ್‌ಕಾಯಿನ್ ಮತ್ತು ಇತರ ಕ್ರಿಪ್ಟೋ ಕರೆನ್ಸಿಗಳ ಭವಿಷ್ಯದ ಬಗ್ಗೆ ಯಾವುದೇ ಸ್ಪಷ್ಟತೆಯನ್ನು ನೀಡದೆಯೇ 2022-23ರ ವೇಳೆಗೆ ಡಿಜಿಟಲ್ ರೂಪಾಯಿಯನ್ನು ನೀಡಲಾಗುವುದು ಎಂದು ಬಜೆಟ್ ನಲ್ಲಿ ಹಣಕಾಸು ಸಚಿವರು ಹೇಳಿದರು.
“ಡಿಜಿಟಲ್ ಕರೆನ್ಸಿಯು ಹೆಚ್ಚು ಪರಿಣಾಮಕಾರಿ ಮತ್ತು ಅಗ್ಗದ ಕರೆನ್ಸಿ ನಿರ್ವಹಣಾ ವ್ಯವಸ್ಥೆಗೆ ಕಾರಣವಾಗುತ್ತದೆ. ಆದ್ದರಿಂದ ಬ್ಲಾಕ್‌ಚೈನ್ ಮತ್ತು ಇತರ ತಂತ್ರಜ್ಞಾನಗಳನ್ನು ಬಳಸಿಕೊಂಡು ಡಿಜಿಟಲ್ ರೂಪಾಯಿಯನ್ನು ಪರಿಚಯಿಸಲು ಉದ್ದೇಶಿಸಲಾಗಿದೆ, ಇದನ್ನು 2022-23 ರಿಂದ ಭಾರತೀಯ ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡುತ್ತದೆ ”ಎಂದು ಹಣಕಾಸು ಸಚಿವರು ಹೇಳಿದರು.
ಹಣಕಾಸು ಸಚಿವರು ತಮ್ಮ ಬಜೆಟ್ ಮಂಡನೆ ಸಮಯದಲ್ಲಿ ಕ್ರಿಪ್ಟೋಕರೆನ್ಸಿಯ ಬಳಕೆಯ ಬಗ್ಗೆ ಹೆಚ್ಚಿನ ಸ್ಪಷ್ಟತೆಯನ್ನು ನೀಡುವ ನಿರೀಕ್ಷೆಯಿದೆ. ಆದರೆ ಬಿಟ್‌ಕಾಯಿನ್ ಅಥವಾ ಇತರ ಕ್ರಿಪ್ಟೋಕರೆನ್ಸಿಗಳ ಬಗ್ಗೆ ಯಾವುದೇ ಉಲ್ಲೇಖ ಮಾಡಿಲ್ಲ. ಬದಲಿಗೆ, ಕ್ರಿಪ್ಟೋ ಕರೆನ್ಸಿ ತೆರಿಗೆಯನ್ನು ಪರಿಚಯಿಸಲಾಗಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ 2022 ಪ್ರಸ್ತುತಿಯಲ್ಲಿ ಹೊಸ ಕ್ರಿಪ್ಟೋ ತೆರಿಗೆಯನ್ನು ಪರಿಚಯಿಸಲಾಗುವುದು, ಅದರ ಅಡಿಯಲ್ಲಿ ವರ್ಚುವಲ್ ಡಿಜಿಟಲ್ ಆಸ್ತಿಗಳಿಗೆ ದೇಶದಲ್ಲಿ 30 ಪ್ರತಿಶತದಷ್ಟು ತೆರಿಗೆ ವಿಧಿಸಲಾಗುವುದು ಎಂದು ಘೋಷಿಸಿದರು.








