Budget 23-24: 2023-24ರ ಬಜೆಟ್ ಗೆ ನೀವೂ ಸಲಹೆ ನೀಡಿ
ಈ ಬಾರಿ ಕೇಂದ್ರ ಸರ್ಕಾರ ಮಂಡಿಸಲಿರುವ ಬಜೆಟ್ ಗೆ ಸಾರ್ವಜನಿಕರು ತಮ್ಮ ಸಲಹೆಗಳನ್ನು ನೀಡಬಹುದೆಂದು ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ.
ಕೇಂದ್ರ ಸರ್ಕಾರವು 2023-24ನೇ ಹಣಕಾಸು ವರ್ಷದ ಬಜೆಟ್ ಅನ್ನು ಫೆಬ್ರವರಿಯಲ್ಲಿ ಮಂಡಿಸಲಿದೆ. ಬಜೆಟ್ನಲ್ಲಿ ಏನಿರಬೇಕು ಹೇಗಿರಬೇಕು ಎಂಬ ಬಗ್ಗೆ ಸಲಹೆ, ಸೂಚನೆ, ಅಭಿಪ್ರಾಯಗಳನ್ನು ನೀಡುವಂತೆ ಸರ್ಕಾರವು ಸಾರ್ವಜನಿಕರಲ್ಲಿ ಕೇಳಿದೆ.
ಪಾರದರ್ಶಕ ಅರ್ಥಿಕ ಅಭಿವೃದ್ಧಿಗಾಗಿ ಬಜೆಟ್ ಗೆ ನಿಮ್ಮ ಸಲಹೆ ಅಭಿಪ್ರಾಯಗಳನ್ನು ಸಂಪೂರ್ಣವಾಗಿ ಸ್ವಾಗತಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರು ತಮ್ಮ ಸಲಹೆಗಳನ್ನು ಡಿಸೆಂಬರ್ 10ರೊಳಗೆ MyGov.in ಪ್ಲಾಟ್ಫಾರ್ಮ್ನಲ್ಲಿ ಕಳುಹಿಸಬೇಕು. ಫೆಬ್ರವರಿಯಲ್ಲಿ ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಬಜೆಟ್ ಮಂಡನೆ ಮಾಡಲಿದೆ.
Budget 23-24: You also suggest the budget for 2023-24