ಬಜೆಟ್ ಪೂರ್ವಭಾವಿ ಸಿದ್ಧತೆ ಫೆಬ್ರವರಿ 7 ರಿಂದ ಆರಂಭ: ಸಿಎಂ ಬೊಮ್ಮಾಯಿ Saaksha Tv
ಬೆಂಗಳೂರು: ಫೆಬ್ರವರಿ 7 ರಿಂದ ಬಜೆಟ್ ಪೂರ್ವಭಾವಿ ಸಿದ್ಧತೆ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆಗಳನ್ನು ಮುಂದಿನ ವಾರದಿಂದ ನಡೆಸಲಾಗುವುದು ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊರೆಯಲಿರುವ ಸಾಲ ಹಾಗೂ ಅನುದಾನಗಳ ಆಧಾರದ ಮೇಲೆ ರಾಜ್ಯ ಸರ್ಕಾರದ ಆಯವ್ಯಯದ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಆಯವ್ಯಯಕ್ಕೂ ಮುನ್ನ ರಾಜ್ಯದ ಎಲ್ಲಾ ಸಂಸದರೊಂದಿಗೆ ಸಭೆ ಸೇರುವ ವಾಡಿಕೆಯಿದೆ. ಈ ಸಭೆಗೆ ಸಮಯ ನಿಗದಿಯಾಗುತ್ತಿದೆ. ಅಂತರರಾಜ್ಯ ಜಲವಿವಾದಗಳಲ್ಲಿ ರಾಜ್ಯವನ್ನು ಪ್ರತಿನಿಧಿಸುವ ವಕೀಲರನ್ನೂ ಭೇಟಿಯಾಗಲಿದ್ದು, ಸೋಮವಾರ ದೆಹಲಿಗೆ ಪ್ರಯಾಣ ಬೆಳೆಸುತ್ತೇನೆ. ನಾಳೆ ದೆಹಲಿಗೆ ಹೋಗಬೇಕು ಎಂದುಕೊಂಡಿದ್ದೆ. ಆದರೆ ಸಂಸದರ ಸಲಹೆ ಮೇರೆಗೆ ಸೋಮವಾರ ಹೋಗಲು ನಿರ್ಧರಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.









