ಬಜೆಟ್ ಅಧಿವೇಶನದಲ್ಲಿ ಹಣದುಬ್ಬರ, ನಿರುದ್ಯೋಗದ ಕುರಿತು ಪ್ರಸ್ತಾಪಿಸಲಿರುವ ಕಾಂಗ್ರೆಸ್ – Saaksha Tv
ನವದೆಹಲಿ : ಅಧಿವೇಶನದಲ್ಲಿ ಕಾಂಗ್ರೆಸ್ ಹಣದುಬ್ಬರ, ನಿರುದ್ಯೋಗ ಮತ್ತು ಉಕ್ರೇನ್‌ನಿಂದ ವಿದ್ಯಾರ್ಥಿಗಳ ಸ್ಥಳಾಂತರಿಸುವಿಕೆ ಸೇರಿದಂತೆ ಹಲವು ವಿಷಯಗಳನ್ನು ಪ್ರಸ್ತಾಪಿಸಲಿದೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಂದು ಬೆಳಿಗ್ಗೆ ಕಾಂಗ್ರೆಸ್‌ನ ಪಕ್ಷದ ಸಂಸದೀಯ ಕಾರ್ಯತಂತ್ರದ ಗುಂಪಿನ ಸಭೆ ನಡೆದಿದೆ. ಸಭೆಯಲ್ಲಿ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕಾದ ವಿಷಯಗಳ ಕುರಿತು ಸಭೆಯಲ್ಲಿ ನಾವು ಚರ್ಚೆ ಮಾಡಿದ್ದೇವೆ. ಹಲವು ಸಮಸ್ಯೆಗಳನ್ನು ಪ್ರಸ್ತಾಪಿಸಲು ನಾವು ಪ್ರಯತ್ನಿಸುತ್ತೇವೆ.
ಬಜೆಟ್ ಅಧಿವೇಶನದ ಮೊದಲಾರ್ಧ ಜ.31ರಂದು ಪ್ರಾರಂಭವಾಗಿ ಫೆ. 11ರಂದು ಮುಕ್ತಾಯಗೊಂಡಿತ್ತು. ನಾಳೆ ಪ್ರಾರಂಭವಾಗುವ ದ್ವಿತೀಯಾರ್ಧ ಏಪ್ರಿಲ್ 8ರಂದು ಮುಕ್ತಾಯಗೊಳ್ಳಲಿದೆ.