ಬೆಂಗಳೂರು: ಇಂದಿನಿಂದ ಮತ್ತೆ ವಿಧಾನ ಮಂಡಲದ ಅಧಿವೇಶನ ಪುನರಾರಂಭವಾಗಲಿದ್ದು, ಮಾಚ್ 5 ರಂದು ಸಿಎಂ ಯಡಿಯೂರಪ್ಪ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಅದಕ್ಕೂ ಮೊದಲು ಬಿಎಸ್ ವೈ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರ ನೀಡಲಿದ್ದಾರೆ. ಆದ್ರೆ ಸ್ವಾತಂತ್ರ‍್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಅವರ ಕುರಿತು ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಹಾಗೂ ಅವರ ಹೇಳಿಕೆಯನ್ನು ಇತರ ಬಿಜೆಪಿ ಸಚಿವರು ಬೆಂಬಲಿಸುತ್ತಿರುವ ಬಗ್ಗೆ ವಿಧಾನಸಭೆಯಲ್ಲಿ ವಿರೋಧ ಪಕ್ಷಗಳು ತೀವ್ರವಾಗಿ ತರಾಟೆಗೆ ತೆಗೆದುಕೊಳ್ಳಲಿವೆ. ಈ ಬಗ್ಗೆ ಮಾತನಾಡಿರುವ ಸಿದ್ದರಾಮಯ್ಯ,ಕೇಂದ್ರದ ವಿರುದ್ಧ ಮಾತನಾಡುವವರ ಧ್ವನಿ ಅಡಗಿಸುವ ವ್ಯವಸ್ಥಿತ ಪಿತೂರಿ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಮತ್ತೊಂದೆಡೆ ಸಾಲ ಮನ್ನಾಕ್ಕಾಗಿ ಮೀಸಲಿಟ್ಟಿದ್ದ 25 ಸಾವಿರ ಕೋಟಿಯನ್ನು ಸರ್ಕಾರ ಬೇರೆ ಉದ್ದೇಶಕ್ಕೆ ಬಳಸಿದೆ ಎನ್ನುವ ಆರೋಪವನ್ನು ಸದನದಲ್ಲಿ ಪ್ರಸ್ತಾಪಿಸಲು ಮಾಜಿ ಸಿಎಂ ಕುಮಾರಸ್ವಾಮಿ ಮುಂದಾಗಿದ್ದಾರೆ. ಈ ಬಗ್ಗೆ ಧ್ವನಿ ಎತ್ತುತ್ತೇನೆ ಎಂದು ಹೆಚ್ ಡಿಕೆ ಟ್ವೀಟ್ ಮೂಲಕ ತಿಳಿಸಿದ್ರು. ಇನ್ನೊಂದೆಡೆ ಇದೇ ಮಾರ್ಚ್ 3 ಮತ್ತು 4 ರಂದು ಸಂವಿಧಾನದ ಬಗ್ಗೆ ವಿಸ್ತೃತ ಚರ್ಚೆ ನಡೆಯಲಿದೆ. ಆ ವೇಳೆ ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಬಿಜೆಪಿಯಲ್ಲಿ ಬಿರುಕು: ಅತೃಪ್ತ ನಾಯಕರ ‘ಬಣ’ ಕದನ
ಕರ್ನಾಟಕದ ಬಿಜೆಪಿ ಘಟಕದಲ್ಲಿ ಬಣ ರಾಜಕೀಯ ಮತ್ತೆ ಮುಂದುವರೆದಿದೆ. ಪಕ್ಷದೊಳಗಿನ ಅತೃಪ್ತ ನಾಯಕರು ಮಾಜಿ ಸಚಿವ ಕುಮಾರ್ ಬಂಗಾರಪ್ಪನವರ ನಿವಾಸದಲ್ಲಿ ಸಭೆ ಸೇರಿದ್ದು, ಈ ಸಭೆ ಹಲವು...