ನವದೆಹಲಿ : ಈಶಾನ್ಯ ದೆಹಲಿ ವೆಲ್ ಕಮ್ ಎಂಬ ಪ್ರದೇಶದಲ್ಲಿ ದೇವಸ್ಥಾನದ (Temple) ಬಳಿಯ ರಸ್ತೆಯಲ್ಲಿ ದುಷ್ಕರ್ಮಿಗಳು ಎಮ್ಮೆಯ (Buffalo) ತಲೆ ಕತ್ತರಿಸಿ ಇಟ್ಟಿದ್ದು, ಪೊಲೀಸರು ಓರ್ವ ಅಪ್ರಾಪ್ತ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ದೆಹಲಿಯ ಬಾಬ್ಪುರನ ಅಜೀಂ (27) ಮತ್ತು 16 ವರ್ಷದ ಬಾಲಕ ಎಂದು ಗುರುತಿಸಲಾಗಿದೆ. ಅಲ್ಲದೇ, ಈ ಪ್ರದೇಶದಲ್ಲಿ ಶಾಂತಿ ಕಾಪಾಡುವಂತೆ ಹಲವರು ಪೊಲೀಸರಿಗೆ ಮನವಿ ಮಾಡಿದ್ದಾರೆ. ಯಾವುದೇ ರೀತಿಯ ವದಂತಿಗಳನ್ನು ಹರಡಬೇಡಿ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಕೂಟರ್ನಲ್ಲಿ ಬಂದ ಇಬ್ಬರು ಕತ್ತರಿಸಿದ ಎಮ್ಮೆಯ ತಲೆಯನ್ನು ದೇವಸ್ಥಾನದ ಹೊರಭಾಗದ ರಸ್ತೆಯಲ್ಲಿ ಎಸೆದಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ತಲೆಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 ಎ (ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಕೃತ್ಯಗಳು), 429 (ಪ್ರಾಣಿಗಳನ್ನು ಕೊಲ್ಲುವುದು), 34 ಅಡಿಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.








