ಮಂಗಳೂರು ನಗರದ ಮಣ್ಣಗುಡ್ಡೆಯಲ್ಲಿ ಪ್ರತ್ಯಕ್ಷವಾಗಿ ಸ್ಥಳೀಯ ನಿವಾಸಿಗಳ ಆತಂಕಕ್ಕೆ ಕಾರಣವಾಗಿದ್ದ, ಕಾಡುಕೋಣವನ್ನು ಚಾರ್ಮಾಡಿಯ ಪಶ್ಚಿಮ ಘಟ್ಟದ ಕಾಡಿಗೆ ಬಿಡಲಾಗಿದ್ದು, ಇದೀಗ ಕಾಡುಕೋಣ ಮೃತಪಟ್ಟಿದೆ ಎಂದು ತಿಳಿದುಬಂದಿದೆ. ನಗರದ ಹೃದಯಭಾಗದಲ್ಲಿ ಕಾಣಿಸಿಕೊಂಡ ಕಾಡುಕೋಣವನ್ನು, ಸ್ಥಳೀಯರ, ಪೊಲೀಸರ ಸಹಕಾರದೊಂದಿಗೆ ಅರಣ್ಯ ಇಲಾಖೆ ಯಶಸ್ವಿಯಾಗಿ ಸೆರೆಹಿಡಿದಿದ್ದು ಚಾರ್ಮಾಡಿಯ ಪಶ್ಚಿಮ ಘಟ್ಟದ ಕಾಡಿಗೆ ಬಿಡಲಾಗಿತ್ತು.
ಕಾಡುಕೋಣವನ್ನು ಸೆರೆ ಹಿಡಿಯುವುದು ಸವಾಲಿನ ಕೆಲಸವಾಗಿದ್ದರಿಂದ ಅರಣ್ಯ ಇಲಾಖೆ ಅರವಳಿಕೆ ತಜ್ಞರ ತಂಡಕ್ಕೆ ಮಾಹಿತಿ ನೀಡಿದ್ದರು. ನಂತರ ಅರವಳಿಕೆ ಚುಚ್ಚುಮದ್ದಿನಿಂದ ಪ್ರಜ್ಞಾ ಹೀನವಾದ ಕಾಡುಕೋಣವನ್ನು ಸೆರೆಹಿಡಿದು ಚಾರ್ಮಾಡಿಯ ಪಶ್ಚಿಮ ಘಟ್ಟದ ಕಾಡಿಗೆ ಬಿಡಲಾಗಿತ್ತು. ಆದರೆ ಕಾಡು ಕೋಣವನ್ನು ರಕ್ಷಿಸುವ ಭರದಲ್ಲಿ ಅರವಳಿಕೆ ಚುಚ್ಚುಮದ್ದಿನ ಡೋಸ್ ಅನ್ನು ಹೆಚ್ಚಿನ ಪ್ರಮಾಣದಲ್ಲಿ ನೀಡಿದ್ದು, ಕಾಡುಕೋಣ ಪ್ರಾಣ ಕಳೆದುಕೊಂಡಿದೆ ಎಂದು ತಿಳಿದುಬಂದಿದೆ.
ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?
ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...








