ಕೊರೊನಾ ಬೀತಿ ಹೆಚ್ಚದ ಹಿನ್ನೆಲೆಯಲ್ಲಿ ಇಡಿ ವಿಶ್ವವೇ ಆತಂಕಕ್ಕೆ ಒಳಗಾಗಿದೆ. ಕರ್ನಾಟಕದಲ್ಲೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವಾ ಹಿನ್ನೆಲೆಯಲ್ಲಿ ವಿಧಾನಸೌಧ, ವಿಕಾಸಸೌಧದ ನೌಕರರ ಮೇಲೆ ನೀಗಾ ಇಡಲಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ವಿಧಾನಸೌಧದಲ್ಲಿ ಥರ್ಮಲ್ ಸ್ಕ್ಯಾನರ್ ಮಾಡ್ತಿದ್ದೇವೆ. ಸೋಂಕು ಹರಡದಂತೆ ಥರ್ಮಲ್ ಸ್ಕ್ಯಾನರ್ ಮಾಡಲು ಆದೇಶ ನೀಡಲಾಗಿದೆ. ಸಿಎಂ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ನಾನೂ ಕೂಡ ಆರೋಗ್ಯಾಧಿಕಾರಿಗಳ ಜೊತೆ ಸಭೆ ಮಾಡ್ತೇನೆ. ಯಾರೂ ಕೂಡ ಆತಂಕಕ್ಕೆ ಒಳಗಾಗೋದು ಬೇಡ. ಆದಷ್ಟು ಸ್ಬಚ್ಚತೆಯನ್ನ ಎಲ್ಲರೂ ಕಾಪಾಡಬೇಕು. ಸರ್ಕಾರ ಎಲ್ಲಾರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಂಡಿದೆ ಎಂದರು. ಇದೆ ವೇಳೆ ಕಲ್ಬುರ್ಗಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಲ್ಬುರ್ಗಿಯಲ್ಲಿ ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ. ಜನರಿಗೆ ಜಾಗೃತಿ ಮೂಡಿಸೋ ಕೆಲಸ ಮಾಡ್ತಿದ್ದೀವಿ. ಕೊರೋನಾದಿಂದ ಮೃತ ವ್ಯಕ್ತಿಯ ಕುಟುಂಬದ ನಾಲ್ವರಿಗೆ ಕಫ ಟೆಸ್ಟ್ ಮಾಡಲಾಗಿದೆ. ಮೂವರಲ್ಲಿ ನೆಗೆಟಿವ್ ಬಂದಿದೆ, ಒಬ್ಬರಿಗೆ ಸೋಂಕು ಪಾಸಿಟಿವ್ ಇದೆ. ಹೀಗಾಗಿ ಅವರ ಮನೆ ಸುತ್ತಾ ಬಫರ್ ಜೋನ್ ಮಾಡಿದ್ದೇವೆ. ಸೋಂಕಿತರ ಮನೆ ಕಡೆ ಯಾರೂ ಹೋಗದಂತೆ ಎಚ್ಚರಿಕೆ ಕೊಟ್ಟಿದ್ದೇವೆ ಎಂದು ಮಾಹಿತಿ ನೀಡಿದರು.
ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’
ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್ಎಸ್ಎಸ್ ಸಹ ಒಪ್ಪಿಗೆ...








