ಊಟಿ: ನಿರ್ಮಾಣ ಹಂತದ ಕಟ್ಟಡ ಕುಸಿದ ಪರಿಣಾಮ 6 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.
ತಮಿಳುನಾಡಿನ (Tamil Nadu) ಊಟಿಯಲ್ಲಿಯೇ ಈ ಘಟನೆ ನಡೆದಿದ್ದು, 6 ಜನ ಕಾರ್ಮಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು, ಹಲವರನ್ನು ರಕ್ಷಿಸಲಾಗಿದೆ.
ಊಟಿಯ ಲವ್ಡೇಲ್ ಹತ್ತಿರ ಈ ಘಟನೆ ನಡೆದಿದೆ ಎನ್ನಲಾಗಿದ್ದು, 6 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ವ್ಯಕ್ತಿ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.