ನಿರ್ಮಾಣ ಹಂತದ ಕಟ್ಟಡ ಕುಸಿದ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿ, 17 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದೆ. ಕಟ್ಟಡದ ಮೇಲ್ಫಾವಣಿ ಕುಸಿದು ಬೀಳುತ್ತಿದ್ದಂತೆ ಅಲ್ಲಿ ಕೆಲಸ ಮಾಡುತ್ತಿದ್ದ 19 ಜನರು ಸಿಲುಕಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಅವಶೇಷ ತೆಗೆದಿದ್ದಾರೆ. ಈ ಪೈಕಿ ಇಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಗಾಯಗೊಂಡಿರುವ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ಘಟನೆಗೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕ ಹಾಗೂ ಗುತ್ತಿಗೆದಾರರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಧ್ರುವಕಾಂತ್ ಠಾಕೂರ್ ತಿಳಿಸಿದ್ದಾರೆ. ಘಟನೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿಷಾಧಿಸಿದ್ದಾರೆ. ಪರಿಹಾರ ಕಾರ್ಯ ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.